ಸಂಸದೆ ಸುಮಲತಾ ಅಂಬರೀಶಗೆ ಕೋವಿಡ್ 19

533

ಪ್ರಜಾಸ್ತ್ರ ಸುದ್ದಿ

ಮಂಡ್ಯ: ಸಂಸದೆ, ನಟಿ ಸುಮಲತಾ ಅಂಬರೀಶ ಅವರಿಗೆ ಕರೋನಾ ಸೋಂಕು ತಗುಲಿರುವುದು ದೃಢಪಟ್ಟಿದೆ. ಈ ಬಗ್ಗೆ ಅವರು ತಮ್ಮ ಫೇಸ್ ಬುಕ್ ಮೂಲಕ ತಿಳಿಸಿದ್ದಾರೆ. ಜುಲೈ 4ರಂದು ನನ್ಗೆ ಸ್ವಲ್ಪ ತಲೆನೋವು ಹಾಗೂ ಗಂಟಲು ನೋವು ಕಾಣಿಸಿಕೊಂಡಿತ್ತು. ಹೀಗಾಗಿ ಕೋವಿಡ್ 19 ಪರೀಕ್ಷೆಗೆ ಒಳಗಾಗಿದ್ದೆ. ಇವತ್ತು ಪಾಸಿಟಿವ್ ಬಂದಿದೆ ಎಂದು ತಿಳಿಸಿದ್ದಾರೆ.

ಸೋಂಕು ದೃಢಪಟ್ಟಿರುವುದ್ರಿಂದ ವೈದ್ಯರ ಸಲಹೆ ಪಡೆದು ಮನೆಯಲ್ಲಿ ಕ್ವಾರಂಟೈನ್ ಆಗಿದ್ದಾರೆ. ರೋಗನಿರೋಧಕ ಶಕ್ತಿಯು ನನ್ನಲ್ಲಿ ಪ್ರಬಲವಾಗಿದೆ ಮತ್ತು ನಿಮ್ಮ ಆಶೀರ್ವಾದ ನನ್ನ ಮೇಲೆ ಇರುವುದ್ರಿಂದ ಬೇಗ ಗುಣಮುಖ ಆಗುತ್ತೇನೆ ಎಂದು ಬರೆದಿದ್ದಾರೆ. ಇನ್ನು ಅವರ ಪ್ರಾಥಮಿಕ ಸಂಪರ್ಕಕ್ಕೆ ಬಂದ ವ್ಯಕ್ತಿಗಳ ವಿವರವನ್ನ ಅಧಿಕಾರಿಗಳಿಗೆ ಕೊಟ್ಟಿದ್ದು, ಯಾರಿಗಾದ್ರೂ ಕೋವಿಡ್ 19 ಲಕ್ಷಣಗಳು ಕಂಡು ಬಂದ್ರೆ ತಕ್ಷಣ ಪರೀಕ್ಷೆ ಮಾಡಿಸಿಕೊಳ್ಳಿ ಎಂದು ಮನವಿ ಮಾಡಿದ್ದಾರೆ.




Leave a Reply

Your email address will not be published. Required fields are marked *

error: Content is protected !!