ಸಧ್ಯ ಮಾಸ್ಕ್ ಕಡ್ಡಾಯವಲ್ಲ: ಸಚಿವ ಸುಧಾಕರ್

188

ಪ್ರಜಾಸ್ತ್ರ ಸುದ್ದಿ

ಬೆಳಗಾವಿ: ಕೋವಿಡ್ 19 ಸೋಂಕು ಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ ಮತ್ತೆ ಮಾರ್ಗಸೂಚಿ ಬಿಡುಗಡೆ ಮಾಡಲಾಗುತ್ತೆ ಎಂದು ಹೇಳಲಾಗುತ್ತಿದೆ. ಮಾಸ್ಕ್ ಕಡ್ಡಾಯ ಎನ್ನಲಾಗುತ್ತಿದೆ. ಈ ಬಗ್ಗೆ ಮಾತನಾಡಿರುವ ಆರೋಗ್ಯ ಸಚಿವ ಡಾ.ಸುಧಾಕರ್, ಸಧ್ಯಕ್ಕೆ ಮಾಸ್ಕ್ ಕಡ್ಡಾಯವಲ್ಲ. ಪರಿಸ್ಥಿತಿ ನೋಡಿಕೊಂಡು ಮಾಸ್ಕ್ ಕಡ್ಡಾಯದ ಬಗ್ಗೆ ನಿರ್ಧರಿಸಲಾಗುವುದು ಎಂದರು.

ಮೊದಲು 2 ಡೋಸ್ ಲಸಿಕೆಗೆ ಜನರು ಪ್ರಾಮುಖ್ಯತೆ ಕೊಟ್ಟಷ್ಟು ಇವಾಗ ಕೊಡುತ್ತಿಲ್ಲ. ಕೋವಿಡ್ ಹೋಗಿದೆ ಅನ್ನೋ ಮನಸ್ಥಿತಿ ಜನರಲ್ಲಿದೆ. ಚೀನಾ, ಕೆಲವು ದೇಶಗಳಲ್ಲಿ ಮತ್ತೆ ಕೋವಿಡ್ ಪರಿಸ್ಥಿತಿ ನೋಡಿಕೊಂಡು ಜನರು ಲಸಿಕೆ ಬಗ್ಗೆ ಯೋಚಿಸುತ್ತಿದ್ದಾರೆ. ಈ ಸಂಬಂಧ ಮುಖ್ಯಮಂತ್ರಿಗಳ ಅಧ್ಯಕ್ಷತೆಯಲ್ಲಿ ಸಭೆ ನಡೆಸಿ ಚರ್ಚಿಸಲಾಗಿದೆ ಎಂದು ತಿಳಿಸಿದರು.

ಜನರು ಆದಷ್ಟು ಬೇಗ 3ನೇ ಡೋಸ್ ಪಡೆಯಬೇಕು. ಈ ಬಗ್ಗೆ ನಿರ್ಲಕ್ಷ್ಯ ಬೇಡ. ಅಡ್ಡ ಪರಿಣಾಮದ ಬಗ್ಗೆ ಸದನದಲ್ಲಿಯೂ ಮಾತುಗಳು ಕೇಳಿ ಬಂದಿವೆ. ಇದಕ್ಕೆ ವೈಜ್ಞಾನಿಕ ದಾಖಲೆ ಇಲ್ಲ. ಇಂತಹ ಅಂತೆಕಂತೆಗಳನ್ನು ಜನರು ಕೇಳಬಾರದು ಅಂತಾ ಹೇಳಿದರು.




Leave a Reply

Your email address will not be published. Required fields are marked *

error: Content is protected !!