ರಾಜ್ಯದಲ್ಲಿ ಮತ್ತೊಂದು ಪ್ಲಾಸ್ಮಾ ಥೆರಪಿ ಯಶಸ್ವಿ

375

ಪ್ರಜಾಸ್ತ್ರ ಸುದ್ದಿ

ಬೆಂಗಳೂರು: ಹುಬ್ಬಳ್ಳಿ ಬಳಿಕ ಬೆಂಗಳೂರಿನಲ್ಲೊಂದು ಪ್ಲಾಸ್ಮಾ ಥೆರಪಿ ಚಿಕಿತ್ಸೆ ಯಶಸ್ವಿಯಾಗಿದೆ. ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಕರೋನಾ ಚಿಕಿತ್ಸೆ ಪಡೆಯುತ್ತಿದ್ದ ವ್ಯಕ್ತಿಗೆ ಪ್ಲಾಸ್ಮಾ ಥೆರಪಿ ಚಿಕಿತ್ಸೆ ನೀಡಲಾಗಿತ್ತು. ಅದು ಇದೀಗ ಯಶಸ್ವಿಯಾಗಿದೆ.

ಪ್ಲಾಸ್ಮಾ ಥರಪಿಯಿಂದ ಕರೋನಾ ಸೋಂಕಿನಿಂದ ಚೇತರಿಸಿಕೊಂಡಿರುವ ವ್ಯಕ್ತಿಯನ್ನ ಸಾಮಾನ್ಯ ವಾರ್ಡ್ ಗೆ ಸ್ಥಳಾಂತರಿಸಲಾಗಿದೆ. ಇನ್ನು ಹುಬ್ಬಳ್ಳಿಯ ಕೆಎಲ್ಇ ಆಸ್ಪತ್ರೆಯಲ್ಲಿ ದಾಖಲಾಗಿದ್ದ ವ್ಯಕ್ತಿಯೊಬ್ಬರು, ಪ್ಲಾಸ್ಮಾ ಥೆರಪಿಯಿಂದ ಕಳೆದ ಮೂರು ದಿನಗಳ ಹಿಂದೆ ಗುಣಮುಖರಾಗಿದ್ದಾರೆ.

ಇದೀಗ ರಾಜ್ಯದಲ್ಲಿ ಪ್ಲಾಸ್ಮಾ ಥರಪಿಯಿಂದ ಇಬ್ಬರು ಗುಣಮುಖರಾಗಿದ್ದು, ಒಂದಿಷ್ಟು ಭರವಸೆ ಮೂಡಿಸಿದೆ. ಇದು ಮುಂದಿನ ದಿನಗಳಲ್ಲಿ ಉಳಿದ ಸೋಂಕಿತರ ಚಿಕಿತ್ಸೆಗೆ ಶಕ್ತಿ ತುಂಬುತ್ತಾ ಕಾದು ನೋಡಬೇಕು.




Leave a Reply

Your email address will not be published. Required fields are marked *

error: Content is protected !!