ಕೋವಿಡ್ ಸೋಂಕು: ಸಿಂದಗಿಯಲ್ಲಿ ಮತ್ತೊಂದು ಶಾಲೆ ಬಂದ್

396

ಪ್ರಜಾಸ್ತ್ರ ಸುದ್ದಿ

ವಿಜಯಪುರ: ಜಿಲ್ಲೆಯ ಸಿಂದಗಿ ತಾಲೂಕಿನ ಹೂವಿನಹಳ್ಳಿಯ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ 6 ಜನರಿಗೆ ಸೋಂಕು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಒಂದು ವಾರ ರಜೆ ಘೋಷಿಸಿದ್ದರು. ಇದೀಗ ಮತ್ತೊಂದು ಶಾಲೆಯಲ್ಲಿ ಸೋಂಕು ಕಾಣಿಸಿಕೊಂಡು ಆ ಶಾಲೆಗೂ ಒಂದು ವಾರ ರಜೆ ಘೋಷಿಸಲಾಗಿದೆ.

ಪಟ್ಟಣದ ಅಲ್ಪಸಂಖ್ಯಾತರ ಮೌಲಾನಾ ಅಝಾದ ಮಾದರಿ ಆಂಗ್ಲ ಮಾಧ್ಯಮ ಶಾಲೆಯ 5 ವಿದ್ಯಾರ್ಥಿಗಳಲ್ಲಿ ಕೋವಿಡ್ ಸೋಂಕು ದೃಢಪಟ್ಟಿದೆ. ಹೀಗಾಗಿ ಒಂದು ವಾರ ರಜೆ ಘೋಷಿಸಿ ಜಿಲ್ಲಾಧಿಕಾರಿ ಪಿ.ಸುನೀಲ್ ಕುಮಾರ್ ಆದೇಶಿಸಿದ್ದಾರೆ.




Leave a Reply

Your email address will not be published. Required fields are marked *

error: Content is protected !!