ಖ್ಯಾತ ಗಾಯಕ ಎಸ್ಪಿಬಿ ಸ್ಥಿತಿ ಗಂಭೀರ: ಐಸಿಯುನಲ್ಲಿ ಚಿಕಿತ್ಸೆ

393

ಪ್ರಜಾಸ್ತ್ರ ಸಿನಿಮಾ ಡೆಸ್ಕ್

ಚೆನ್ನೈ: ಭಾರತದ ಖ್ಯಾತ ಗಾಯಕ ಎಸ್.ಪಿ ಬಾಲಸುಬ್ರಹ್ಮಣ್ಯಂ ಅವರ ಸ್ಥಿತಿ ಗಂಭೀರವಾಗಿದ್ದು, ಐಸಿಯುನಲ್ಲಿ ಚಿಕಿತ್ಸೆ ನಡೆಲಾಗ್ತಿದೆ. ಕರೋನಾ ಸೋಂಕು ಕಾಣಿಸಿಕೊಂಡಿದ್ರಿಂದ ಆಸ್ಪತ್ರೆಗೆ ದಾಖಲಾಗಿದ್ದ ಎಸ್ಪಿಬಿ ಸ್ಥಿತಿ ಸಧ್ಯ ಗಂಭೀರವಾಗಿದೆ ಎಂದು ತಿಳಿದು ಬಂದಿದೆ.

74 ವರ್ಷದ ಎಸ್ಪಿಬಿ ಆಗಸ್ಟ್ 5ರಂದು ಆಸ್ಪತ್ರೆಗೆ ದಾಖಲಾಗಿದ್ರು. ಕಳೆದ ರಾತ್ರಿ ಆರೋಗ್ಯದಲ್ಲಿ ಏರುಪೇರು ಕಾಣಿಸಿಕೊಂಡಿದೆ. ಹೀಗಾಗಿ ಅವರನ್ನ ಲೈಫ್ ಸಪೋರ್ಟ್ ಅಳವಡಿಸಿ ಐಸಿಯುನಲ್ಲಿ ಚಿಕಿತ್ಸೆ ನೀಡಲಾಗ್ತಿದೆ. ಕರೋನಾ ಸೋಂಕಿಗೆ ತುತ್ತಾದಾಗ, ಟ್ವೀಟ್ ಮಾಡಿ ಆಸ್ಪತ್ರೆಗೆ ದಾಖಲಾಗಿರುವ ವಿಷಯ ಸ್ವತಃ ತಿಳಿಸಿದ್ರು.




Leave a Reply

Your email address will not be published. Required fields are marked *

error: Content is protected !!