5ಕ್ಕಿಂತ ಹೆಚ್ಚು ಶಾಲಾ ಮಕ್ಕಳಲ್ಲಿ ಕೋವಿಡ್ ದೃಢಪಟ್ಟರೆ ವಿಜಯಪುರದಲ್ಲಿ ಶಾಲೆ ರಜೆ

457

ಪ್ರಜಾಸ್ತ್ರ ಸುದ್ದಿ

ವಿಜಯಪುರ: ಐದಕ್ಕಿಂತ ಹೆಚ್ಚು ಶಾಲಾ‌‌ ಮಕ್ಕಳಿಗೆ ಕೋವಿಡ್ ಸೋಂಕು ದೃಢವಾದರೆ ಆ ಶಾಲೆಗೆ ರಜೆ ಘೋಷಣೆ ಮಾಡಲಾಗುವುದು ಎಂದು ಜಿಲ್ಲಾಧಿಕಾರಿ ಪಿ.ಸುನೀಲಕುಮಾರ್ ತಿಳಿಸಿದ್ದಾರೆ.

ನಗರದಲ್ಲಿ ಮಾತನಾಡಿದ ಅವರು, 5 ಅಥವಾ ಅದಕ್ಕಿಂತ ಹೆಚ್ಚಿನ ಮಕ್ಕಳಿಗೆ ಒಂದೇ ಶಾಲೆಯಲ್ಲಿ ಕರೋನಾ ಸೋಂಕು ಪಾಸಿಟಿವ್ ಪತ್ತೆಯಾದರೆ ಆ ಶಾಲೆಗೆ ಒಂದು ವಾರಗಳ ಕಾಲ ರಜೆ ಘೋಷಿಸಿ ಆದೇಶ ಹೊರಡಿಸಿದರು. ಹೀಗಾಗಿ ಶಿಕ್ಷಣ ಮಂಡಳಿಗಳು ಕೋವಿಡ್ ವಿಚಾರದಲ್ಲಿ ತುಂಬಾ ಕಟ್ಟುನಿಟ್ಟಿನ ಕ್ರಮಗಳನ್ನು ತೆಗೆದುಕೊಳ್ಳಲು ತಿಳಿಸಲಾಗಿದೆ.

ಇನ್ನು ಜಿಲ್ಲೆಯಲ್ಲಿ 150 ಮಕ್ಕಳಲ್ಲಿ ಕೋವಿಡ್ ಪಾಸಿಟಿವ್ ಪತ್ತೆಯಾಗಿದೆ. ಜನವರಿ 1 ರಿಂದ 15ರವರೆಗೆ ಒಟ್ಟು 664 ಜನರಲ್ಲಿ ಕೊರೋನಾ ಪಾಸಿಟಿವ್ ದೃಢಪಟ್ಟಿದೆ. ಇದರಲ್ಲಿ 150 ಮಕ್ಕಳಲ್ಲಿ ಇದ್ದಾರೆ ಎಂದು ತಿಳಿಸಿದರು.




Leave a Reply

Your email address will not be published. Required fields are marked *

error: Content is protected !!