ಸ್ಥಳೀಯ ಸಂಸ್ಥೆಗಳ ಅಧ್ಯಕ್ಷ, ಉಪಾಧ್ಯಕ್ಷ ಚುನಾವಣೆಗೆ ಒಪ್ಪಿಗೆ

195

ಪ್ರಜಾಸ್ತ್ರ ಸುದ್ದಿ

ಬೆಂಗಳೂರು: ಸ್ಥಳೀಯ ಸಂಸ್ಥೆಯ ಅಧ್ಯಕ್ಷ, ಉಪಾಧ್ಯಕ್ಷ, ಮೇಯರ್ ಹಾಗೂ ಉಪ ಮಯೇರ್ ಚುನಾವಣೆಗೆ ರಾಜ್ಯ ಸರ್ಕಾರ ಒಪ್ಪಿಗೆ ಸೂಚಿಸಿದೆ. ಸೋಮವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ಈ ಬಗ್ಗೆ ನಿರ್ಧಾರ ತೆಗೆದುಕೊಳ್ಳಲಾಗಿದ್ದು, ಸರ್ಕಾರದ ಮುಖ್ಯ ಕಾರ್ಯದರ್ಶಿ ಸಿ.ರವಿ ಕುಮಾರ್ ಇಂದು ಆದೇಶ ಪತ್ರ ಹೊರಡಿಸಿದ್ದಾರೆ.

ಇದರ ಜೊತೆಗೆ ಸರ್ಕಾರದ ಸಂಸ್ಥೆಗಳು, ನೋಂದಾಯಿತ ಸಂಘ, ಸಂಸ್ಥೆಗಳ ಪದಾಧಿಕಾರಿಗಳನ್ನು ಒಳಗೊಂಡಂತೆ ಅಧ್ಯಕ್ಷ, ಉಪಾಧ್ಯಕ್ಷ ಸ್ಥಾನಕ್ಕೂ ಚುನಾವಣೆ ನಡೆಸಲು ಒಪ್ಪಿಗೆ ಸೂಚಿಸಲಾಗಿದೆ. ಇದೆಲ್ಲದಕ್ಕೂ ಕೋವಿಡ್ 19 ಮಾರ್ಗಸೂಚಿ ಅನ್ವಯ ಚುನಾವಣೆ ನಡೆಸಲು ಸೂಚಿಸಲಾಗಿದೆ.




Leave a Reply

Your email address will not be published. Required fields are marked *

error: Content is protected !!