ಪ್ರಜಾಸ್ತ್ರ ಸುದ್ದಿ
ಬೆಂಗಳೂರು: ಜೆಡಿಎಸ್ ಮಾಜಿ ಎಂಎಲ್ ಸಿ ಹಾಗೂ ನಿರ್ಮಾಪಕ ಸಿ.ಆರ್ ಮನೋಹರ್ ಕಾಂಗ್ರೆಸ್ ಸೇರ್ಪಡೆಯಾಗಿದ್ದಾರೆ. ಇಂದು ಕೆಪಿಸಿಸಿ ಕಚೇರಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಅಧ್ಯಕ್ಷ ಡಿ.ಕೆ ಶಿವಕುಮಾರ್, ವಿಪಕ್ಷ ನಾಯಕ ಸಿದ್ದರಾಮಯ್ಯ ನೇತೃತ್ವದಲ್ಲಿ ಕಾಂಗ್ರೆಸ್ ಸೇರಿದರು.
ಕೆಲ ದಿನಗಳ ಹಿಂದೆಯೇ ಕಾಂಗ್ರೆಸ್ ಸೇರುವ ಬಗ್ಗೆ ಹೇಳಿದ್ದರು. ಅಲ್ದೇ ನವೆಂಬರ್ 29ರಂದು ವಿಧಾನ ಪರಿಷತ್ ಸದಸ್ಯ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದರು. ಆಗ ಬಿಜೆಪಿ ಸೇರುತ್ತಾರೆ ಅನ್ನೋ ಸುದ್ದಿ ಹಬ್ಬಿತ್ತು. ಅದಕ್ಕೆ ಅವರ ಸ್ಪಷ್ಟನೆ ನೀಡಿದ್ದರು.