ಬೆಳೆ ಸಮೀಕ್ಷೆ: ಸಿಂದಗಿಯಲ್ಲಿ ಫೋನ್ ಇನ್ ಕಾರ್ಯಕ್ರಮ

400

ಪ್ರಜಾಸ್ತ್ರ ಸುದ್ದಿ

ಸಿಂದಗಿ: ಬೆಳೆ ಸಮೀಕ್ಷೆ ಆ್ಯಪ್ ಮೂಲಕ ರೈತರೆ ನೇರವಾಗಿ ಸಮೀಕ್ಷೆ ನಡೆಸಿ ಸರ್ಕಾರಕ್ಕೆ ಸಲ್ಲಿಸಬಹುದಾಗಿದೆ. ಈ ಸಂಬಂಧ ಈಗಾಗ್ಲೇ 2020-21ನೇ ಸಾಲಿನ ಬೆಳೆ ಸಮೀಕ್ಷೆ ಕಾರ್ಯ ಶುರುವಾಗಿದೆ. ಹೀಗಾಗಿ ರೈತರಿಗೆ ಆ್ಯಪ್ ಮೂಲಕ ಬೆಳೆ ಸಮೀಕ್ಷೆ ನಡೆಸುವುದು ಹೇಗೆ ಅನ್ನೋದರ ಕುರಿತು ತಿಳುವಳಿಕೆ ನೀಡಲು ಫೋನ್ ಇನ್ ಕಾರ್ಯಕ್ರಮ ಆಯೋಜಿಸಲಾಗಿದೆ.

ರೈತರಿಗೆ ತಾಂತ್ರಿಕವಾಗಿ ಎದುರಾಗುವ ಸಮಸ್ಯೆ ಸೇರಿದಂತೆ ಬೆಳೆ ಸಮೀಕ್ಷೆ ಕುರಿತು ಮಾಹಿತಿ ನೀಡಲು ಸಿಂದಗಿ ಹಾಗೂ ದೇವರಹಿಪ್ಪರಗಿ ತಹಶೀಲ್ದಾರ್, ಸಹಾಯಕ ಕೃಷಿ ನಿರ್ದೇಶಕರು, ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರ ಮುಖಾಂತರ ಆಗಸ್ಟ್ 29ರಂದು, ಬೆಳಗ್ಗೆ 11 ಗಂಟೆಯಿಂದ ಮಧ್ಯಾಹ್ನ 1 ಗಂಟೆಯವರೆಗೆ ಫೋನ್ ಇನ್ ಕಾರ್ಯಕ್ರಮ ನಡೆಸಲಾಗ್ತಿದೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.




Leave a Reply

Your email address will not be published. Required fields are marked *

error: Content is protected !!