Search

ಟ್ಟ್ರ್ಯಾಕ್ಟರ್ ಗೆ ಕ್ರೂಸರ್ ಡಿಕ್ಕಿ: ದಂಪತಿ ಸಾವು

159

ಪ್ರಜಾಸ್ತ್ರ ಸುದ್ದಿ

ವಿಜಯಪುರ: ಕಬ್ಬು ಸಾಗಿಸುತ್ತಿದ್ದ ಟ್ರ್ಯಾಕ್ಟರ್ ಗೆ ಹಿಂಬದಿಯಿಂದ ಕ್ರೂಸರ್ ಡಿಕ್ಕಿ ಹೊಡೆದ ಪರಿಣಾಮ ದಂಪತಿ ಮೃತಪಟ್ಟಿದ್ದು, 9 ಜನರು ಗಾಯಗೊಂಡ ಘಟನೆ, ಧೂಳಖೇಡ ಹತ್ತಿರ ನಡೆದಿದೆ. ರಾಷ್ಟ್ರೀಯ ಹೆದ್ದಾರಿ 50ರಲ್ಲಿ ಭೀಕರ ಅಪಘಾತ ಸಂಭವಿಸಿದೆ.

ಅಥಣಿ ಮೂಲದ ಭಯ್ಯಾಜಿ ಶಿಂಧೆ(50) ಇವರ ಪತ್ನಿ ಸುಮಿತ್ರಾ ಶಿಂಧೆ(45) ಮೃತ ದುರ್ದೈವಿಗಳು. ಮಹಾರಾಷ್ಟ್ರದ ಅಕ್ಕಲಕೋಟ ಹತ್ತಿರದ ಸ್ವಾಮಿ ಸಮರ್ಥ ಕ್ಷೇತ್ರಕ್ಕೆ ಹೊರಟಿದ್ದ ವೇಳೆ ಅಪಘಾತ ನಡೆದಿದೆ. ಗಾಯಾಳುಗಳನ್ನು ಸೋಲಾಪುರ ಆಸ್ಪತ್ರೆಗೆ ದಾಖಲಿಸಲಾಗಿದೆ. ಝಳಕಿ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿದ್ದಾರೆ.




Leave a Reply

Your email address will not be published. Required fields are marked *

error: Content is protected !!