ಕಾಂಗ್ರೆಸ್ ನೂತನ ಸಾರಥಿ ಯಾರು?

275

ಪ್ರಜಾಸ್ತ್ರ ಸುದ್ದಿ

ನವದೆಹಲಿ: ಇಂದು ಸಿಡಬ್ಲುಸಿ ಸಭೆ ನಡೆದಿದ್ದು, ಎಐಸಿಸಿ ಅಧ್ಯಕ್ಷರ ಅವಧಿ ಮುಗಿದ ಹಿನ್ನೆಲೆಯಲ್ಲಿ ಸೋನಿಯಾ ಗಾಂಧಿ ರಾಜೀನಾಮೆ ಸಲ್ಲಿಸಿದ್ದಾರೆ ಎಂದು ಹೇಳಲಾಗ್ತಿದೆ. ಹೀಗಾಗಿ ಮುಂದಿನ ಸಾರಥಿ ಯಾರು ಅನ್ನೋ ಕುತೂಹಲ ಮೂಡಿಸಿದೆ.

ಕಳೆದ ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಸೋಲಿನ ಹೊಣೆ ಹೊತ್ತು ರಾಹುಲ ಗಾಂಧಿ ರಾಜೀನಾಮೆ ಸಲ್ಲಿಸಿದ್ರು. ಯಾರೆ ಎಷ್ಟೇ ಹೇಳಿದ್ರೂ ಅವರು ಮತ್ತೆ ಅಧ್ಯಕ್ಷ ಗಾದಿ ಏರಲಿಲ್ಲ. ಹೀಗಾಗಿ ಸೋನಿಯಾ ಗಾಂಧಿ ಅವರು ಹಂಗಾಮಿ ಅಧ್ಯಕ್ಷರಾದ್ರು. ಇದೀಗ ನೂತನ ಅಧ್ಯಕ್ಷರ ನೇಮಕ ಸಂಬಂಧ ಕಾಂಗ್ರೆಸ್ ಕಾರ್ಯಕಾರಣಿ ಸಮಿತಿ ಸಭೆ ನಡೆಯುತ್ತಿದೆ.

ಇದುವರೆಗೂ ಎಐಸಿಸಿ ಅಧ್ಯಕ್ಷ ಸ್ಥಾನವನ್ನ ಗಾಂಧಿ ಕುಟುಂಬದವರೆ ವಹಿಸಿಕೊಂಡಿದ್ದಾರೆ. ಈ ಕಾರಣಕ್ಕೆ ಸೋನಿಯಾ ಗಾಂಧಿ ಮನವೊಲಿಸುವ ಕೆಲಸ ನಡೆಯುತ್ತಿದೆ. ಇಲ್ಲಿ ಪ್ರಿಯಾಂಕಾ ಗಾಂಧಿ ವಾದ್ರಾ ಹೆಸರು ಸಹ ಕೇಳಿ ಬರ್ತಿದೆ. ಇನ್ನು ಕೆಲವರು ಗಾಂಧಿ ಕುಟುಂಬ ಹೊರತು ಪಡಿಸಿ ಬೇರೆಯವರಿಗೆ ಅವಕಾಶ ಕೊಡಿ ಎನ್ನುತ್ತಿದ್ದಾರೆ. ಹೀಗಾಗಿ ಶತಮಾನಗಳ ಇತಿಹಾಸ ಹೊಂದಿರುವ ಕಾಂಗ್ರೆಸ್ ಪಕ್ಷದ ಹೊಣೆ ಯಾರು ಹೊರಲಿದ್ದಾರೆ? ಗಾಂಧಿ ಕುಟುಂಬ ಹೊರತು ಪಡಿಸಿ ಯಾರು ಮೊದಲ ಅಧ್ಯಕ್ಷರಾಗ್ತಾರೆ ಅನ್ನೋ ಕುತೂಹಲ ಮೂಡಿದೆ.




Leave a Reply

Your email address will not be published. Required fields are marked *

error: Content is protected !!