ಸಿಲಿಂಡರ್ ಸ್ಫೋಟ: ಬಾಲಕ ಸಾವು

189

ಪ್ರಜಾಸ್ತ್ರ ಸುದ್ದಿ

ಬೆಂಗಳೂರು: ಸಿಲಿಂಡರ್ ಸ್ಫೋಟಗೊಂಡ ಹಿನ್ನೆಲೆಯಲ್ಲಿ ಬಾಲಕನೊಬ್ಬ ಮೃತಪಟ್ಟ ದಾರುಣ ಘಟನೆ ನಗರದ ಹೆಬ್ಬಾಳ ಹತ್ತಿರದ ಗುಡ್ಡದಹಳ್ಳಿಯಲ್ಲಿ ನಡೆದಿದೆ. 6ನೇ ತರಗತಿ ವಿದ್ಯಾರ್ಥಿ ಮಹೇಶ್(13) ಮೃತ ಬಾಲಕ.

ಸಿಲಿಂಡರ್ ಫಿಲ್ಲಿಂಗ್ ಅಂಗಡಿಯಲ್ಲಿ ಈ ಘಟನೆ ನಡೆದಿದೆ. ಸ್ಫೋಟದ ಸಮಯದಲ್ಲಿ ಬಾಲಕ ಮಹೇಶ ಅಂಗಡಿ ಪಕ್ಕದಲ್ಲಿದ್ದ. ಇದರಿಂದಾಗಿ ತೀವ್ರವಾಗಿ ಗಾಯಗೊಂಡಿದ್ದ, ತಕ್ಷಣ ಆತನನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಆದರೆ, ಚಿಕಿತ್ಸೆ ಫಲಿಸದೆ ಬಾಲಕ ಮೃತಪಟ್ಟಿದ್ದಾನೆ.

ಗಾಸ್ ತುಂಬಿಸುವ ಗೋಡಾನ್ ದೇವರಾಜ್ ಎಂಬುವವರಿಗೆ ಸೇರಿದೆ. ಲಿಯಾಕತ್ ಎಂಬಾತ ಗ್ಯಾಸ್ ರೀ ಫಿಲ್ಲಿಂಗ್ ಮಾಡುತ್ತಿದ್ದ. ಘಟನೆ ಬಳಿಕ ಆತ ಪರಾರಿಯಾಗಿದ್ದಾನೆ. ಆತನ ವಿರುದ್ಧ ಹೆಬ್ಬಾಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.




Leave a Reply

Your email address will not be published. Required fields are marked *

error: Content is protected !!