ಸಿಲಿಂಡರ್ ಸ್ಫೋಟಕ್ಕೆ 7 ಸಾವು 15 ಜನರಿಗೆ ಗಾಯ

334

ಉತ್ತರ ಪ್ರದೇಶ: ಸಿಲಿಂಡರ್ ಸ್ಪೋಟದಿಂದ ಬರೋಬ್ಬರಿ 7 ಜನ ಸಾವನ್ನಪ್ಪಿರುವ ಧಾರುಣ ಘಟನೆ ಉತ್ತರ ಪ್ರದೇಶದ ಪೂರ್ವ ಭಾಗದ ಮವೂ ವಲಯದಲ್ಲಿ ನಡೆದಿದೆ.

ಮೊಹಮೊಬಾದ್ ನ ಮನೆಯೊಂದರಲ್ಲಿ ಸಿಲಿಂಡರ್ ಸ್ಫೋಟಗೊಂಡಿದೆ. ಇದರ ತೀವ್ರತೆಗೆ ಎರಡು ಅಂತಸ್ತಿನ ಕಟ್ಟಡ ಕುಸಿದಿದೆ. ಇದ್ರಿಂದಾಗಿ 7 ಜನ ಸಾವನ್ನಪ್ಪಿದ್ದಾರೆ. 15 ಜನರಿಗೆ ಗಾಯಗಳಾಗಿವೆ. ಇನ್ನು ಅವಶೇಷಗಳಡಿಯಲ್ಲಿ ಜನರು ಸಿಲಿಕಿರುವ ಶಂಕೆ ವ್ಯಕ್ತವಾಗಿದೆ. ರಕ್ಷಣಾ ಕಾರ್ಯಾಚರಣೆಯಲ್ಲಿ ಅಗ್ನಿಶಾಮಕ ದಳ ಸಿಬ್ಬಂದಿ ತೊಡಗಿದ್ದಾರೆ.

ಘಟನೆಯಲ್ಲಿ ಸಾವನ್ನಪ್ಪಿದ್ದ ಕುಟುಂಬಗಳಿಗೆ ಸೂಕ್ತ ಪರಿಹಾರ ನೀಡುವಂತೆ ಜಿಲ್ಲಾಡಳಿತಕ್ಕೆ ಸಿಎಂ ಯೋಗಿ ಆದಿತ್ಯನಾಥ ಸೂಚಿಸಿದ್ದಾರೆ.




Leave a Reply

Your email address will not be published. Required fields are marked *

error: Content is protected !!