ಪ್ರಜಾಸ್ತ್ರ ಸುದ್ದಿ
ಹುಬ್ಬಳ್ಳಿ: ತಾಲೂಕಿನ ಮಂಟೂರ ಗ್ರಾಮದ ಮನೆಯೊಂದರಲ್ಲಿನ ಗ್ಯಾಸ್ ಸಿಲಿಂಡರ್ ಸ್ಫೋಟಗೊಂಡ ಪರಿಣಾಮ ಐದು ಮನೆಗಳಿಗೆ ಹಾನಿಯಾಗಿದೆ. ಅಗ್ನಿಶಾಮಕ ಸಿಬ್ಬಂದಿ ಬಂದು ಬೆಂಕಿ ನಂದಿಸುವ ಕೆಲಸ ಮಾಡಿದರು.
ದಾವಲ್ ಸಾಬ್, ಖಾಸೀಂ ಸಾಬ್, ರಮೇಶಪ್ಪ, ಅಶೋಕಪ್ಪ ಹಾಗೂ ಮಲ್ಲೇಶಪ್ಪ ಎಂಬುವರ ಮನೆಗಳಿಗೆ ಹಾನಿಯಾಗಿದೆ. ಮನೆಯಲ್ಲಿ ಯಾರು ಇಲ್ಲದ ವೇಳೆ ಶಾರ್ಟ್ ಸರ್ಕ್ಯೂಟ್ ನಿಂದ ಈ ಅನಾಹುತ ಸಂಭವಿಸಿದ್ದು, ಅದೃಷ್ಟವಶಾತ್ ಯಾರಿಗೂ ಏನೂ ಆಗಿಲ್ಲ. ಖಾಸೀಂ ಸಾಬ್, ದಾವಲ್ ಸಾಬ್ ಎಂಬುವರ ಮನೆಗಳು ಸಂಪೂರ್ಣ ಹಾನಿಯಾಗಿವೆ.