ಡಾಲಿ ಚುನಾವಣೆ ಸ್ಪರ್ಧೆ ಬಗ್ಗೆ ಸಿಎಂ ಏನಂದರು?

192

ಪ್ರಜಾಸ್ತ್ರ ಸುದ್ದಿ

ಬೆಂಗಳೂರು: ಸ್ಯಾಂಡಲ್ ವುಡ್ ನಟ ಡಾಲಿ ಧನಂಜಯ್ ಲೋಕಸಭೆ ಚುನಾವಣೆ ಸ್ಪರ್ಧಿಸುತ್ತಾರೆ ಎನ್ನುವ ಮಾತುಗಳು ಕೇಳಿ ಬರುತ್ತಿವೆ. ಅವರು ವಿಚಾರಗಳು, ಆಡುವ ಮಾತುಗಳು, ವೈಚಾರಿಕ ನಿಲುವುಗಳು ಕಾಂಗ್ರೆಸ್ ಪಕ್ಷಕ್ಕೆ ಹೊಂದುವಂತೆ ಇವೆ. ಹೀಗಾಗಿ ಲೋಕಸಭೆ ಚುನಾವಣೆಯಲ್ಲಿ ಕಣಕ್ಕೆ ಇಳಿಯಲಿದ್ದಾರೆ ಎಂದು ಹೇಳಲಾಗುತ್ತಿದೆ.

ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದಿಂದ ಸಂಸದ ಪ್ರತಾಪ್ ಸಿಂಹ ವಿರುದ್ಧ ನಟ ಡಾಲಿ ಧನಂಜಯ್ ಸ್ಪರ್ಧಿಸಲಿದ್ದಾರೆ ಎಂದು ಕೇಳಿ ಬರುತ್ತಿರುವ ಮಾತುಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಉತ್ತರಿಸಿ, ಕಾಂಗ್ರೆಸ್ ನಲ್ಲಿ ಆ ರೀತಿ ಯಾವುದೇ ಚರ್ಚೆಗಳು ನಡೆದಿಲ್ಲ. ಈ ಬಗ್ಗೆಯೂ ನನಗೆ ಯಾವುದೇ ಮಾಹಿತಿ ಇಲ್ಲ ಎನ್ನುವ ಮೂಲಕ ಇದೊಂದು ಗಾಳಿ ಸುದ್ದಿ ಅಂತಾ ಹೇಳಿದ್ದಾರೆ.




Leave a Reply

Your email address will not be published. Required fields are marked *

error: Content is protected !!