ಹಿರಿಯ ನಟಿಗೆ ಅತ್ಯುನ್ನತ ಪ್ರಶಸ್ತಿ

108

ಪ್ರಜಾಸ್ತ್ರ ಸಿನಿಮಾ ಡೆಸ್ಕ್

ಚಿತ್ರರಂಗದಲ್ಲಿನ ಜೀವಮಾನ ಸಾಧನೆಗಾಗಿ ಹಿರಿಯ ನಟಿ ವಹೀದಾ ರೆಹಮಾನ್ ಅವರಿಗೆ ದಾದಾಸಾಹೇಬ್ ಪಾಲ್ಕೆ ಪ್ರಶಸ್ತಿ ಘೋಷಿಸಲಾಗಿದೆ. ಮಾಹಿತಿ ಮತ್ತು ತಂತ್ರಜ್ಞಾನ ಖಾತೆ ಸಚಿವ ಅನುರಾಗ್ ಠಾಕೂರ್ ಈ ಕುರಿತು ಸ್ಪಷ್ಟಪಡಿಸಿದ್ದಾರೆ.

ಈ ಗೌರವದ ಕುರಿತು ತಿಳಿಸಲು ನನಗೆ ತುಂಬಾ ಖುಷಿಯಾಗುತ್ತೆ. ಭಾರತೀಯ ಚಿತ್ರರಂಗಕ್ಕೆ ವಹೀದಾ ರೆಹಮಾನ್ ಅವರು ನೀಡಿದ ಜೀವಮಾನ ಸಾಧನೆಗಾಗಿ ಅತ್ಯುನ್ನತ ಪ್ರಶಸ್ತಿಯಾದ ದಾದಾಸಾಹೇಬ್ ಪಾಲ್ಕೆ ಪ್ರಶಸ್ತಿಗೆ ಭಾಜನರಾಗಿದ್ದಾರೆ ಎಂದು ಎಕ್ಸ್ ನಲ್ಲಿ ಬರೆದುಕೊಂಡಿದ್ದಾರೆ.

ಪ್ಯಾಸ್, ಕಾಗಜ್ ಕೇ ಪೂಲ್, ಚೌದವಿ ಕ ಚಾಂದ್, ಸಾಹೇಬ್ ಬಿವಿ ಔರ್ ಗುಲಾಮ್, ಕಾಮೋಷಿ ಸೇರಿದಂತೆ ಹಲವಾರು ಚಿತ್ರಗಳಲ್ಲಿ ನಟಿಸಿದ್ದಾರೆ. ಕಳೆದ 5 ದಶಕಗಳಿಂದ ಚಿತ್ರರಂಗದಲ್ಲಿ ಗುರುತಿಸಿಕೊಂಡಿದ್ದಾರೆ. ಇವರ ಸಾಧನೆಗೆ ಹಲವಾರು ರಾಷ್ಟ್ರೀಯ ಪ್ರಶಸ್ತಿಗಳು ಮುಡಿಗೇರಿವೆ.
Leave a Reply

Your email address will not be published. Required fields are marked *

error: Content is protected !!