ದಲಿತ ಯುವಕನ ಹತ್ಯೆ ಆರೋಪಿಗಳಿಗೆ ಕಠಿಣ ಶಿಕ್ಷೆ

302

ಪ್ರಜಾಸ್ತ್ರ ಸುದ್ದಿ

ಕಲಬುರಗಿ: ಮುಸ್ಲಿಂ ಯುವತಿಯನ್ನು ಪ್ರೀತಿಸಿದ್ದಕ್ಕೆ ದಲಿತ ಯುವಕನನ್ನು ಹತ್ಯೆ ಮಾಡಿದ ಘಟನೆ ಕಲಬುರಗಿಯಲ್ಲಿ ನಡೆದಿದೆ. ಈ ಬಗ್ಗೆ ಎಲ್ಲೆಡೆ ಆಕ್ರೋಶ ವ್ಯಕ್ತವಾಗಿದೆ. ಹೈದ್ರಾಬಾದ್ ಬಳಿಕ ಕರ್ನಾಟಕದಲ್ಲಿ ಇಂತಹದೊಂದು ಘಟನೆ ನಡೆದಿದೆ.

ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಕಲಬುರಗಿ ಉಸ್ತುವಾರಿ ಸಚಿವ ಮುರುಗೇಶ್ ನಿರಾಣಿ, ಘಟನೆ ನಡೆದ ತಕ್ಷಣವೇ ಪೊಲೀಸರು ಕಾನೂನು ಪ್ರಕಾರ ಆರೋಪಿಗಳನ್ನು ಬಂಧಿಸಿದ್ದಾರೆ. ಕಾನೂನು ಅಡಿಯಲ್ಲಿ ಮುಂದಿನ ಪ್ರಕ್ರಿಯೆ ನಡೆಯಬೇಕಿದೆ. ಅದರಂತೆ ಕಠಿಣ ಶಿಕ್ಷೆಯೂ ಆಗುತ್ತೆ ಎಂದಿದ್ದಾರೆ.

ಕಾಂಗ್ರೆಸ್ ಹಾಗೂ ಜೆಡಿಎಸ್ ನವರು ಇದನ್ನು ರಾಜಕೀಯಕ್ಕೆ ಬಳಸಿಕೊಳ್ಳಲು ನೋಡುತ್ತಿದ್ದಾರೆ. ಘಟನೆ ನಡೆದ ತಕ್ಷಣ ಎಸ್ಪಿಯವರೊಂದಿಗೆ ಫೋನ್ ಮೂಲಕ ಮಾತನಾಡಿ, ತಪ್ಪಿತಸ್ಥರನ್ನು ಬಂಧಿಸುವಂತೆ ಸೂಚನೆ ನೀಡಿದ್ದೇನೆ. ಇದರಲ್ಲಿ ಯಾವುದೇ ಕಾರಣಕ್ಕೂ ರಾಜಿ ಇಲ್ಲ ಎಂದರು.




Leave a Reply

Your email address will not be published. Required fields are marked *

error: Content is protected !!