ಪ್ರಜಾಸ್ತ್ರ ಸಿನಿಮಾ ಡೆಸ್ಕ್
ಬೆಂಗಳೂರು: ನಟ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿಯನದ ಹೊಸ ಚಿತ್ರದ ಟೈಟಲ್ ರಿಲೀಸ್ ಮಾಡಲಾಗಿದೆ. ಗಣೇಶ ಹಬ್ಬದ ಪ್ರಯುಕ್ತ ಡಿ ಬಾಸ್ ಹೊಸ ಚಿತ್ರದ ಟೈಟಲ್ ‘ಕ್ರಾಂತಿ’ ಬಿಡುಗಡೆಯಾಗಿದೆ.
ಮೀಡಿಯಾ ಹೌಸ್ ಸ್ಟುಡಿಯೋ ಬ್ಯಾನರ್ ಅಡಿಯಲ್ಲಿ ಚಿತ್ರ ನಿರ್ಮಾಣವಾಗುತ್ತಿದೆ. ಶೈಲಜಾ ನಾಗ್ ಹಾಗೂ ಬಿ.ಸುರೇಶ್ ನಿರ್ಮಾಣ ಮಾಡುತ್ತಿದ್ದಾರೆ. ವಿ.ಹರಿಕೃಷ್ಣ ಸಂಗೀತವಿದೆ. ಕ್ರಾಂತಿ ಚಿತ್ರದ ಟೈಟಲ್ ಕುರಿತು ಅಭಿಮಾನಿಗಳು ಸೇರಿದಂತೆ ಎಲ್ಲರಲ್ಲೂ ಕುತೂಹಲ ಮೂಡಿದೆ. ಕನ್ನಡ ಸೇರಿದಂತೆ ತೆಲುಗು, ತಮಿಳು ಹಾಗೂ ಹಿಂದಿಯಲ್ಲೂ ಚಿತ್ರ ರೆಡಿಯಾಗುತ್ತಿದೆ. ಚಿತ್ರಕ್ಕೆ ಪ್ರತಿಯೊಬ್ಬರು ಶುಭ ಕೋರುತ್ತಿದ್ದಾರೆ.