ಮೈಸೂರು ಅರಮನೆಯಲ್ಲಿ 1.30ರ ತನಕ ಆಯುಧ ಪೂಜೆ

155

ಪ್ರಜಾಸ್ತ್ರ ಸುದ್ದಿ

ಮೈಸೂರು: ದಸರಾ ಹಬ್ಬದ ಸಂಭ್ರಮ ಸಡಗರ ಎಲ್ಲೆಡೆ ಜೋರಾಗಿದೆ. ಇಂದು ಆಯುಧ ಪೂಜೆಯನ್ನು ಎಲ್ಲೆಡೆ ಆಚರಿಸಲಾಗುತ್ತಿದೆ. ಅರಮನೆಯಲ್ಲಿ ಬೆಳಗ್ಗೆ 5.30ರಿಂದ ಆಯುಧ ಪೂಜೆ ಶುರುವಾಗಿದ್ದು, ಮಧ್ಯಾಹ್ನ 1.30ಕ್ಕೆ ಮುಗಿಯಲಿದೆ.

ಚಂಡಿಕಾ ಹೋಮ, ಪೂಜಾ ವಿಧಿ, ಆನೆ ಬಾಗಿಲಿಗೆ ಪಟ್ಟದ ಆನೆ, ಪಟ್ಟದ ಹಸು, ಪಟ್ಟದ ಕುದುರೆ ಬಂದಿವೆ. ರಾಜರ ಆಯುಧಗಳು ಅರಮನೆಯಿಂದ ಕೋಡಿ ಸೋಮೇಶ್ವರ ದೇಗುಲಕ್ಕೆ ರವಾನೆಯಾಗಿವೆ. ರಾಜಪುರೋಹಿತರ ಮಾರ್ಗದರ್ಶನದಂತೆ ಯುಧವೀರ್ ಕೃಷ್ಣದತ್ತ ಚಾಮರಾಜ ಒಡೆಯುರ್ ಅವರು ಪೂಜೆ ಸಲ್ಲಿಸುತ್ತಿದ್ದಾರೆ.

ಇದೆ ರೀತಿ ನಾಡಿನ ತುಂಬ ಜನರು ಮನೆಗಳಲ್ಲಿ, ದೇವಸ್ಥಾನಗಳಲ್ಲಿ ವಿಶೇಷ ಪೂಜೆ ಸಲ್ಲಿಸುತ್ತಿದ್ದಾರೆ. ತಮ್ಮ ಕೆಲಸ ಕಾರ್ಯಗಳಿಗೆ ಬಳಸುವ ವಸ್ತುಗಳನ್ನು ಪೂಜೆ ಮಾಡುತ್ತಿದ್ದಾರೆ.




Leave a Reply

Your email address will not be published. Required fields are marked *

error: Content is protected !!