ಮಾಜಿ ಶಾಸಕ ಕೆ.ಮಲ್ಲಪ್ಪ ನಿಧನ

292

ಪ್ರಜಾಸ್ತ್ರ ಸುದ್ದಿ

ದಾವಣಗೆರೆ: ಕಾಂಗ್ರೆಸ್ ಹಿರಿಯ ನಾಯಕ, ಮಾಜಿ ಶಾಸಕ ಕೆ.ಮಲ್ಲಪ್ಪ ಸೋಮವಾರ ಬೆಳಗ್ಗೆ ನಿಧನರಾಗಿದ್ದಾರೆ. 92 ವರ್ಷದ ಕೆ.ಮಲ್ಲಪ್ಪ, ಹರಿಯರ ಹಾಗೂ ಮಾಯಕೊಂಡ ಕ್ಷೇತ್ರದಿಂದ ಎರಡು ಬಾರಿ ಶಾಸಕರಾಗಿ ಆಯ್ಕೆಯಾಗಿದ್ದರು. ಒಮ್ಮೆ ವಿಧಾನ ಪರಿಷತ್ ಸದಸ್ಯರು ಸಹ ಆಗಿದ್ರು.

ಕೆಲ ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಇವರು, ಆಂಜನೇಯ ಬಡವಾವಣೆಯಲ್ಲಿರುವ ಸ್ವಗೃಹದಲ್ಲಿ ನಿಧನರಾಗಿದ್ದಾರೆ. ಮಾಜಿ ಸಿಎಂ, ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯನವರಿಗೆ ಆಪ್ತರಾಗಿದ್ದ ಕೆ.ಮಲ್ಲಪ್ಪ, ಅಹಿಂದ ಸಂಘಟನೆಯ ಪ್ರಮುಖ ರೂವಾರಿಯಾಗಿದ್ರು.




Leave a Reply

Your email address will not be published. Required fields are marked *

error: Content is protected !!