ವಿವಿಧ ಅಧಿಕಾರಿಗಳ ಸಭೆ ನಡೆಸಿದ ಡಿಸಿಎಂ ಸವದಿ

619

ಅಥಣಿ: ಉಪ ಮುಖ್ಯಮಂತ್ರಿಗಳಾದ ಲಕ್ಷ್ಮಣ ಸಂಗಪ್ಪ ಸವದಿ ಹಾಗೂ ಚಿಕ್ಕೋಡಿ ಲೋಕಸಭಾ ಸದಸ್ಯ ಅಣ್ಣಾಸಾಬ ಜೋಲ್ಲೆ ಅವರ ನೇತೃತ್ವದಲ್ಲಿ ವಿವಿಧ ಗ್ರಾಮ ಪಂಚಾಯ್ತಿ ವ್ಯಾಪ್ತಿಯ ಅಧಿಕಾರಿಗಳ ಸಭೆ ನಡೆಸಿದ್ರು.

ತಾಲೂಕಿನ ಹಲ್ಯಾಳ, ದರೂರ, ನದಿ ಇಂಗಳಗಾಂವ, ತೀರ್ಥ, ಸಪ್ತಸಾಗರ, ಸಂಕ್ರಟ್ಟಿ ಮುಂತಾದ ಗ್ರಾಮಗಳಿಗೆ ಭೇಟಿ ನೀಡಿ ಆಯಾ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ತಾಲೂಕಾ ಮಟ್ಟದ ಅಧಿಕಾರಿಗಳ ಮತ್ತು ಸ್ಥಳೀಯ ಜನ ಪ್ರತಿ ನಿಧಿಗಳ ಸಭೆಯನ್ನ ಮಾಡಿದರು.

ಸಭೆಯಲ್ಲಿ ಆಶಾ ಕಾರ್ಯಕರ್ತೆಯರು, ಅಂಗನವಾಡಿ ಕಾರ್ಯಕರ್ತೆಯರು, ಪ್ರಾಥಮಿಕ ಆರೋಗ್ಯ ಕೇಂದ್ರಗಳ ಸಿಬ್ಬಂದಿ, ಗ್ರಾಮ ಪಂಚಾಯತಿ ಪಿಡಿಓ ಮತ್ತು ಇತರೆ ಸಿಬ್ಬಂದಿ ಸಮಸ್ಯೆಗಳನ್ನ ಆಲಿಸಿದರು. ಅಲ್ಲದೆ ಕರೋನಾ ಸೋಂಕು ಹರಡದಂತೆ ತಡೆಗಟ್ಟಲು ಕೈಗೊಂಡ ಕ್ರಮಗಳ ಬಗ್ಗೆ ಮಾಹಿತಿ ಪಡೆದರು.

ಇದೆ ಸಮಯದಲ್ಲಿ ಸಾರ್ವಜನಿಕರು ಕೃಷ್ಣಾ ನದಿಗೆ ನೀರು ಕಡಿಮೆ ಆಗುತ್ತಿದೆ ಎಂದು ಪ್ರಶ್ನೆ ಮಾಡಿದಾಗ, ಬರುವ ದಿನಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಎದುರಾಗದಂತೆ ಕ್ರಮಕೈಗೊಳ್ಳುವದಾಗಿ ಭರವಸೆ ನೀಡಿದರು. ಈ ವೇಳೆ ಅಥಣಿ ಶಾಸಕ ಮಹೇಶ ಕುಮಠಳ್ಳಿ, ಸಿಪಿಐ ಶಂಕರಗೌಡ ಬಸನಗೌಡರ, ತಾ.ಪಂ ಅಧಿಕಾರಿ ರವಿಂದ್ರ ಬಂಗಾರೆಪ್ಪ, ತಹಶೀಲ್ದಾರ್ ದುಂಡಪ್ಪಾ ಕೋಮಾರ, ಗ್ರಾ.ಪಂ ಅಧ್ಯಕ್ಷ ಕಮಲವ್ವಾ, ಮುರಗುಂಡಿ, ಸದಸ್ಯ ಮುದಕಣ್ಣಾ ಶೇಗುಣಸಿ, ಪಿಡಿಓ ವಿ ಪಾಯಕ, ವೈದ್ಯಾದಿಕಾರಿ ಡಾ.ಅದಾಡೆ ಸೇರಿದಂತೆ ಸರಕಾರಿ ಆಸ್ಪತ್ರೆ ಮತ್ತು ಸಿಡಿಪಿಒ ಗ್ರಾ.ಪಂ ಸಿಬ್ಬಂದಿ ವರ್ಗದವರು ಪಾಲ್ಗೊಂಡಿದ್ದರು.




Leave a Reply

Your email address will not be published. Required fields are marked *

error: Content is protected !!