ಮಣಿಪುರಕ್ಕೆ ದೆಹಲಿ ಮಹಿಳಾ ಆಯೋಗದ ಅಧ್ಯಕ್ಷೆ ಭೇಟಿ

114

ಪ್ರಜಾಸ್ತ್ರ ಸುದ್ದಿ

ನವದೆಹಲಿ: ಮಣಿಪುರ ಸರ್ಕಾರದ ಮನವಿಯನ್ನು ತಿರಸ್ಕರಿಸಿ ಲೈಂಗಿಕ ದೌರ್ಜನ್ಯಕ್ಕೆ ಒಳಗಾದ ಮಹಿಳೆಯರ ಭೇಟಿಗಾಗಿ ಇಂದು ದೆಹಲಿ ಮಹಿಳಾ ಆಯೋಗದ ಅಧ್ಯಕ್ಷೆ ಸ್ವಾತಿ ಮಲಿವಾಲ್ ಇಂಪಾಲ್ ಗೆ ತೆರಳಿದ್ದಾರೆ. ದೆಹಲಿ ವಿಮಾನ ನಿಲ್ದಾಣದಿಂದ ಇಂದು ಮಧ್ಯಾಹ್ನ ಇಂಪಾಲ್ ಗೆ ಪ್ರಯಾಣ ಬೆಳೆಸಿದರು.

ಈ ವೇಳೆ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ನಾನು ಮಣಿಪುರ ಸರ್ಕಾರಕ್ಕೆ ಪತ್ರ ಬರೆದಿದ್ದೇನೆ. ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸರಿಯಿಲ್ಲ. ಭೇಟಿಯನ್ನು ಮುಂದೂಡುವಂತೆ ಹೇಳಿದ್ದರು. ಆದರೆ, ಸಂತ್ರಸ್ತರಿಗೆ ಸಹಾಯ ಮಾಡುವ ಉದ್ದೇಶದಿಂದ ಭೇಟಿ ನೀಡುತ್ತಿದ್ದೇನೆ. ಭೇಟಿಗೆ ಅವಕಾಶ ನೀಡಿ ಎಂದು ಮನವಿ ಮಾಡುತ್ತೇನೆ ಅಂತಾ ತಿಳಿಸಿದರು.

ಮೇ 4ರಂದು ಕಾಂಗ್ ಪೋಕ್ಸಿ ಜಿಲ್ಲೆಯ ಫೈನೋಮ್ ಗ್ರಾಮದಲ್ಲಿ ಇಬ್ಬರು ಬುಡುಕಟ್ಟು ಮಹಿಳೆಯರ ಮೇಲೆ ಸಾಮೂಹಿಕ ಅತ್ಯಾಚಾರ, ಬೆತ್ತಲೆ ಮೆರವಣಿಗೆ ನಡೆದಿದೆ. 72 ದಿನಗಳ ಬಳಿಕ ಪ್ರಕರಣ ಬೆಳಕಿಗೆ ಬಂದಿದ್ದು, ಎಲ್ಲೆಡೆ ಆಕ್ರೋಶ ವ್ಯಕ್ತವಾಗುತ್ತಿದೆ. ಪ್ರಕರಣ ಸಂಬಂಧ 6 ಆರೋಪಿಗಳನ್ನು ಬಂಧಿಸಲಾಗಿದೆ.




Leave a Reply

Your email address will not be published. Required fields are marked *

error: Content is protected !!