ನಿವೃತ್ತ ಪೊಲೀಸ್ ಸಿಬ್ಬಂದಿ ಶವ ಪತ್ತೆ

142

ಪ್ರಜಾಸ್ತ್ರ ಸುದ್ದಿ

ಬೆಂಗಳೂರು: ಮೆಜೆಸ್ಟಿಕ್ ಕೆಎಸ್ಆರ್ ಟಿಸಿ ಬಸ್ ನಿಲ್ದಾಣದಲ್ಲಿ ನಿವೃತ್ತ ಪೊಲೀಸ್ ಸಿಬ್ಬಂದಿಯೊಬ್ಬರ ಶವ ಪತ್ತೆಯಾಗಿದೆ. ಮುನಿಆಂಜನೇಯ(65) ಮೃತ ವ್ಯಕ್ತಿಯೆಂದು ತಿಳಿದು ಬಂದಿದೆ. ದೊಡ್ಡಬಳ್ಳಾಪುರದ ಮುದುರಹೊಸಹಳ್ಳಿ ನಿವಾಸಿ ಮುನಿಆಂಜನೇಯ, ನಿನ್ನೆ ಮಧ್ಯಾಹ್ನ ಸ್ನೇಹಿತರೊಂದಿಗೆ ಧರ್ಮಸ್ಥಳಕ್ಕೆ ಹೊರಟಿದ್ದರಂತೆ. ಇಂದು ಮುಂಜಾನೆ ಶವವಾಗಿ ಪತ್ತೆಯಾಗಿದ್ದಾರೆ.

ಸ್ನೇಹಿತರೊಂದಿಗೆ ಸೋಮವಾರ ಮಧ್ಯಾಹ್ನ ಧರ್ಮಸ್ಥಳಕ್ಕೆ ಹೊರಟವರು ಇಂದು ಮುಂಜಾನೆ ಶವವಾಗಿ ಪತ್ತೆಯಾಗಿದ್ದು, ಹಲವು ಅನುಮಾನಗಳನ್ನು ಮೂಡಿಸಿದೆ. ಇವರ ಬಳಿ ಇದ್ದ ನಗದು, ಚಿನ್ನಾಭರಣ ಕಾಣೆಯಾಗಿವೆ. ಮೃತದೇಹವನ್ನು ವಿಕ್ಟೋರಿಯಾ ಆಸ್ಪತ್ರೆಗೆ ಸಾಗಿಸಲಾಗಿದೆ. ಉಪ್ಪಾರಪೇಟೆ ಪೊಲೀಸ್ ಠಾಣೆಯ ಅಧಿಕಾರಿಗಳು ತನಿಖೆ ನಡೆಸಿದ್ದಾರೆ.




Leave a Reply

Your email address will not be published. Required fields are marked *

error: Content is protected !!