ಸಿಂದಗಿ ಬಸ್ ನಿಲ್ದಾಣದಲ್ಲಿ ಶವ ಪತ್ತೆ

418

ಪ್ರಜಾಸ್ತ್ರ ಸುದ್ದಿ

ಸಿಂದಗಿ: ಪಟ್ಟಣದ ಕೇಂದ್ರ ಬಸ್ ನಿಲ್ದಾಣದಲ್ಲಿ ಬುಧವಾರ ಅಪರಿಚಿತ ಶವವೊಂದು ಪತ್ತೆಯಾಗಿದೆ. ಅಂದಾಜು 65-70 ವರ್ಷದ ವೃದ್ಧನ ಶವವಾಗಿದೆ. ಯಾವುದೋ ಕಾಯಿಲೆಯಿಂದ ಮೃತಪಟ್ಟಿರಬಹುದು ಎಂದು ಶಂಕಿಸಲಾಗಿದೆ.

ಇನ್ನೊಂದು ಕಡೆ ಆತನ ಪರಿಸ್ಥಿತಿ ನೋಡಿದರೆ ಭಿಕ್ಷುಕ ಇರಬಹುದು ಎನ್ನಲಾಗುತ್ತಿದೆ. ಮೃತದೇಹವನ್ನು ತಾಲೂಕು ಆಸ್ಪತ್ರೆ ಶವಗಾರಕ್ಕೆ ರವಾನಿಸಲಾಗಿದೆ. ಆತನ ಗುರುತು ಪತ್ತೆ ಕಾರ್ಯವನ್ನು ಪೊಲೀಸರು ನಡೆಸಿದ್ದಾರೆ. ಸಿಂದಗಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.




Leave a Reply

Your email address will not be published. Required fields are marked *

error: Content is protected !!