ಪೊಲೀಸರಿಗೆ ನೀಡಿದ ಆಹಾರದಲ್ಲಿ ಇಲಿ, ಕ್ರಿಮಿನಲ್ ಕೇಸ್ ಗೆ ಸಜ್ಜು

410

ಪ್ರಜಾಸ್ತ್ರ ಸುದ್ದಿ

ಬೆಂಗಳೂರು: ಇಂದು ಬೆಂಗಳೂರು ಬಂದ್ ಕರೆ ನೀಡಿದ್ದರಿಂದ ನಗರದಲ್ಲಿ ಬಿಗಿ ಪೊಲೀಸ್ ಬಂದೋಬಸ್ತಿ ಮಾಡಲಾಗಿತ್ತು. ಹೀಗಾಗಿ ಹೆಚ್ಚಿನ ಸಂಖ್ಯೆಯಲ್ಲಿ ಪೊಲೀಸರ ನಿಯೋಜನೆ ಮಾಡಲಾಗಿತ್ತು. ಈ ಕಾರಣಕ್ಕೆ ಆಯಾ ವಿಭಾಗದಿಂದ ಆಹಾರ ಪೂರೈಕೆ ಮಾಡಲಾಗಿದೆ. ಹೀಗೆ ಬಂದ ಆಹಾರದಲ್ಲಿ ಸತ್ತ ಇಲಿ ಪತ್ತೆಯಾಗಿದೆ.

ಆರ್.ಎಂ.ಸಿ ಯಾರ್ಡ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಿಯೋಜನೆಗೊಂಡಿದ್ದ ಪೊಲೀಸರಿಗೆ ರೈಸ್ ಬಾತ್ ವಿತರಣೆ ಮಾಡಲಾಗಿದೆ. ಒಂದು ಆಹಾರದ ಪೊಟ್ಟಣದಲ್ಲಿ ಸತ್ತ ಇಲಿ ಪತ್ತೆಯಾಗಿದೆ. ಇದರ ಫೋಟೋವನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡ ಪೊಲೀಸ್ ಸಿಬ್ಬಂದಿ ಅಧಿಕಾರಿಗಳ ವಿರುದ್ಧ ಅಸಮಾಧಾನ ಹೊರ ಹಾಕಿದ್ದಾರೆ.

ಕರ್ತವ್ಯದಲ್ಲಿದ್ದ ಪೊಲೀಸರಿಗೆ ಈ ರೀತಿಯ ಆಹಾರ ನೀಡಿರುವುದಕ್ಕೆ ಎಲ್ಲಡೆಯಿಂದ ಆಕ್ರೋಶ ವ್ಯಕ್ತವಾಗುತ್ತಿದ್ದು, ಇದರ ಉಸ್ತುವಾರಿ ವಹಿಸಿಕೊಂಡಿದ್ದ ಇನ್ಸ್ ಪೆಕ್ಟರ್ ಗಳಿಗೆ ನೋಟಿಸ್ ನೀಡಲಾಗಿದೆ. ಹೋಟೆಲ್ ವಿರುದ್ಧ ಕ್ರಿಮಿನಲ್ ಕೇಸ್ ದಾಖಲಿಸಲಾಗುವುದು ಎಂದು ಜಂಟಿ ಪೊಲೀಸ್ ಆಯುಕ್ತ ಎಂ.ಎನ್ ಅನುಚೇತ್ ಹೇಳಿದ್ದಾರೆ.




Leave a Reply

Your email address will not be published. Required fields are marked *

error: Content is protected !!