ಮೂರು ಪುಟ್ಟ ಮಕ್ಕಳೊಂದಿಗೆ ತಾಯಿ ಆತ್ಮಹತ್ಯೆ

221

ಪ್ರಜಾಸ್ತ್ರ ಸುದ್ದಿ

ಬಾಗಲಕೋಟೆ: ಮೂರು ಪುಟ್ಟ ಹೆಣ್ಮಕ್ಕಳಿಗೆ ವಿಷವುಣಿಸಿ ತಾಯಿಯೂ ಆತ್ಮಹತ್ಯೆ ಮಾಡಿಕೊಂಡಿರುವ ಹೃದಯವಿದ್ರಾವಕ ಘಟನೆ ಜಿಲ್ಲೆಯ ತಿಮ್ಮಾಪೂರ ಗ್ರಾಮದಲ್ಲಿ ನಡೆದಿದೆ. ರೇಖಾ ಬಗಲಿ(28), ಮಕ್ಕಳಾದ ಸನ್ನಿಧಿ(07), ಸಮೃದ್ಧಿ(04) ಹಾಗೂ ಶ್ರೀನಿಧಿ(02) ಮೃತ ದುರ್ದೈವಿಗಳು.

ಮೂರು ಹೆಣ್ಮಕ್ಕಳು ಆಗಿರುವುದರಿಂದ ಮಾನಸಿಕವಾಗಿ ನೊಂದಿದ್ದಳಂತೆ ರೇಖಾ. ಈ ಹಿಂದೆಯೂ ಎರಡು ಬಾರಿ ಆತ್ಮಹತ್ಯೆಗೆ ಪ್ರಯತ್ನಿಸಿದ್ದಳಂತೆ. ಮಾವಿನ ಹಣ್ಣಿನರಸದಲ್ಲಿ ರಾಸಾಯನಿಕ ಬೆರೆಸಿ ಮಕ್ಕಳಿಗೆ ಕೊಟ್ಟು ನಂತರ ತಾನೂ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.




Leave a Reply

Your email address will not be published. Required fields are marked *

error: Content is protected !!