ಪಕ್ಷದಿಂದ ಪ್ರಜ್ವಲ್ ಉಚ್ಛಾಟನೆ ನಿರ್ಧಾರ: ಕುಮಾರಸ್ವಾಮಿ

62

ಪ್ರಜಾಸ್ತ್ರ ಸುದ್ದಿ

ಶಿವಮೊಗ್ಗ: ಜೆಡಿಎಸ್ ಪಕ್ಷದಿಂದ ಸಂಸದ ಪ್ರಜ್ವಲ್ ರೇವಣ್ಣರನ್ನು ಉಚ್ಛಾಟನೆ ಮಾಡಬೇಕೆಂದು ರಾಷ್ಟ್ರೀಯ ಅಧ್ಯಕ್ಷ ದೇವೇಗೌಡರು ನಿರ್ಧಾರಿಸಿದ್ದಾರೆ ಎಂದು ಕುಮಾರಸ್ವಾಮಿ ತಿಳಿಸಿದ್ದಾರೆ.

ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಪಕ್ಷದಿಂದ ಪ್ರಜ್ವಲ್ ಉಚ್ಛಾಟನೆ ಬಗ್ಗೆ ಭಾನುವಾರ ರಾತ್ರಿ ದೇವೇಗೌಡರ ಜೊತೆ ಚರ್ಚಿಸಿ ತೀರ್ಮಾನ ತೆಗೆದುಕೊಳ್ಳಲಾಗಿದೆ. ಮಂಗಳವಾರ ಹುಬ್ಬಳ್ಳಿಯಲ್ಲಿ ಕೋರ್ ಕಮಿಟಿ ಸಭೆಯಲ್ಲಿ ಅಧಿಕೃತ ಆದೇಶ ಹೊರಡಿಸಲಾಗುವುದು.

ಈ ಪ್ರಕರಣದಲ್ಲಿ ಯಾವುದೇ ರಾಜಿ ಇಲ್ಲ. ಹೆಣ್ಮಕ್ಕಳ ಧ್ವನಿಯಾಗಿ ನಾನೂ ಧ್ವನಿ ಎತ್ತುತ್ತೇನೆ. ಈ ವಿಚಾರದಲ್ಲಿ ನನ್ನ ಹಾಗೂ ನನ್ನ ತಂದೆಯ ಬಗ್ಗೆ ಯಾರಿಗೂ ಸಂಶಯ ಬೇಡ. ಮೋದಿ, ಬಿಜೆಪಿ, ದೇವೇಗೌಡರಿಗೂ ಈ ಪ್ರಕಣಕ್ಕೂ ಸಂಬಂಧವಿಲ್ಲ. ತಪ್ಪಾಗಿದ್ದರೆ ಈ ನೆಲದ ಕಾನೂನು ಅಡಿಯಲ್ಲಿ ಶಿಕ್ಷೆಯಾಗಬೇಕು ಎಂದಿದ್ದಾರೆ.




Leave a Reply

Your email address will not be published. Required fields are marked *

error: Content is protected !!