ಎಸ್ಸಿ, ಎಸ್ಟಿ ಮೀಸಲಾತಿ ಹೆಚ್ಚಳಕ್ಕೆ ನಿರ್ಧಾರ: ಸಿಎಂ ಬೊಮ್ಮಾಯಿ

175

ಪ್ರಜಾಸ್ತ್ರ ಸುದ್ದಿ

ಬೆಂಗಳೂರು: ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡಗಳ ಮೀಸಲಾತಿ ಹೆಚ್ಚಿಸುವ ಸಂಬಂಧ ಜಸ್ಟಿಸ್ ನಾಗಮೋಹನ್ ದಾಸ್ ಸಮಿತಿಯ ವರದಿ ಅನುಷ್ಠಾನಕ್ಕೆ ರಾಜ್ಯ ಸರ್ಕಾರ ಮುಂದಾಗಿದೆ. ಈ ಬಗ್ಗೆ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಸ್ಪಷ್ಟಪಡಿಸಿದ್ದಾರೆ.

ಪರಿಶಿಷ್ಟ ಜಾತಿ ಮೀಸಲಾತಿಯನ್ನು ಶೇ.15ರಿಂದ 17ಕ್ಕೆ, ಪರಿಶಿಷ್ಟ ಪಂಗಡದ ಮೀಸಲಾತಿ ಶೇ.3ರಿಂದ 7ಕ್ಕೆ ಏರಿಸಲು ನಿರ್ಣಿಸಲಾಗಿದೆ ಎಂದಿದ್ದಾರೆ. ಇನ್ನು ಹಲವು ಬೇಡಿಕೆಗಳು ಇವೆ. ನಾವು ಈ ಬಗ್ಗೆ ಸಮಗ್ರ ಚಿಂತನೆ ಮಾಡಬೇಕಿದೆ. ಎಸ್ಟಿ, ಎಸ್ಟಿಯಲ್ಲಿ ಒಳಗೆ ಇದ್ದವರಿಗೆ ಇನ್ನು ನ್ಯಾಯ ಸಿಕ್ಕಿಲ್ಲ ಅನ್ನೋ ಕೂಗಿದೆ. ಅದರ ಬಗ್ಗೆಯೂ ಆಯೋಗಗಳು ತೀರ್ಮಾನಗಳನ್ನು ಕೊಟ್ಟಿರುವ ಹಿನ್ನೆಲೆಯಲ್ಲಿ ಅದರ ಬಗ್ಗೆಯೂ ಒಳ್ಳೆಯ ತೀರ್ಮಾನ ಮಾಡುವುದಕ್ಕೆ ನಮ್ಮ ಸರ್ಕಾರ ಮುಂದಾಗುತ್ತೆ ಎಂದಿದ್ದಾರೆ.




Leave a Reply

Your email address will not be published. Required fields are marked *

error: Content is protected !!