ರಾಷ್ಟ್ರೀಯ ಆರೋಗ್ಯ ತುರ್ತು ಪರಿಸ್ಥಿತಿ ಘೋಷಿಸಲು ಸಲಹೆ

251

ಪ್ರಜಾಸ್ತ್ರ ಸುದ್ದಿ

ನವದೆಹಲಿ: ದೇಶದಲ್ಲಿ ದಿನದಿಂದ ದಿನಕ್ಕೆ ಕೋವಿಡ್ ಸೋಂಕಿತರ ಪ್ರಮಾಣ ಹಾಗೂ ಸಾವಿನ ಪ್ರಮಾಣ ಏರಿಕೆಯಾಗುತ್ತಲೇ ಇದೆ. ಹೀಗಾಗಿ ಜನರು ಮತ್ತೆ ಸಂಕಷ್ಟಕ್ಕೆ ಒಳಗಾಗಿದ್ದಾರೆ. ಹೀಗಾಗಿ ರಾಷ್ಟ್ರೀಯ ಆರೋಗ್ಯ ತುರ್ತು ಪರಿಸ್ಥಿತಿ ಘೋಷಿಸಿ ಎಂದು ಮಾಜಿ ಸಚಿವ ಕಪಿಲ್ ಸಿಬಲ್ ಸಲಹೆ ನೀಡಿದ್ದಾರೆ.

ಈ ಬಗ್ಗೆ ಟ್ವೀಟ್ ಮಾಡಿರುವ ಮಾಜಿ ಕೇಂದ್ರ ಸಚಿವ ಕಪಿಲ್ ಸಿಬಲ್, ಚೇತರಿಕೆಗಿಂತ ಸೋಂಕಿನ ಪ್ರಮಾಣ ಹೆಚ್ಚಾಗ್ತಿದೆ. ಹೀಗಾಗಿ ಆರೋಗ್ಯ ತುರ್ತು ಪರಿಸ್ಥಿತಿ ಘೋಷಿಸಬೇಕು. ಚುನಾವಣಾ ರ್ಯಾಲಿಗಳನ್ನ ಸ್ಥಿಗತಿಗೊಳಿಸಬೇಕು ಎಂದು ಹೇಳಿದ್ದಾರೆ.




Leave a Reply

Your email address will not be published. Required fields are marked *

error: Content is protected !!