ದಿಲ್ಲಿ ಎಲೆಕ್ಷನ್: ಇಂದು ಬಿಜೆಪಿ ಮೊದಲ ಪಟ್ಟಿ!

318

ನವದೆಹಲಿ: ದೆಹಲಿ ವಿಧಾನಸಭೆಗೆ ಚುನಾವಣೆ ಘೋಷಣೆಯಾಗಿದ್ದು, ಅಭ್ಯರ್ಥಿಗಳ ಆಯ್ಕೆಯ ಕಸರತ್ತು ಜೋರಾಗಿದೆ. ಬಿಜೆಪಿ ಗುರವಾರ ತಡರಾತ್ರಿಯವರೆಗೂ ಅಭ್ಯರ್ಥಿಗಳ ಆಯ್ಕೆ ಕುರಿತು ಸುದೀರ್ಘ ಸಭೆ ನಡೆಸಿದೆ. ಪ್ರಧಾನಿ ನರೇಂದ್ರ ಮೋದಿ, ದೆಹಲಿ ಘಟಕದ ಬಿಜೆಪಿ ಅಧ್ಯಕ್ಷ ಮನೋಜ ತಿವಾರಿ ಸಭೆಯ ನೇತೃತ್ವವಹಿಸಿಕೊಂಡಿದ್ರು. ಇಂದು ಬಿಜೆಪಿ ಅಭ್ಯರ್ಥಿಗಳ ಮೊದಲ ಪಟ್ಟಿ ರಿಲೀಸ್ ಆಗುವ ಸಾಧ್ಯತೆಯಿದೆ.

70 ವಿಧಾನಸಭೆ ಕ್ಷೇತ್ರಗಳಿಗೆ ಫೆಬ್ರವರಿ 8ರಂದು ಚುನಾವಣೆ ನಡೆಯಲಿದೆ. ಜನವರಿ 21 ನಾಮಪತ್ರ ಸಲ್ಲಿಸಲು ಕೊನೆಯ ದಿನವಾಗಿದೆ. ಹೀಗಾಗಿ ಈ ಬಾರಿ ಹೇಗಾದ್ರು ಮಾಡಿ ದೆಹಲಿಯಲ್ಲಿ ಅಧಿಕಾರದ ಗದ್ದುಗೆ ಹಿಡಯಬೇಕೆಂದು ಕೇಸರಿ ನಾಯಕರು ಪ್ಲಾನ್ ಮಾಡ್ತಿದ್ದು, ಸೂಕ್ತ ಅಭ್ಯರ್ಥಿಗಳ ಆಯ್ಕೆ ನಡೆಸಿದೆ. ಸಭೆಯಲ್ಲಿ ಕೇಂದ್ರ ಗೃಹ ಸಚಿವ ಹಾಗೂ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ ಶಾ, ರಕ್ಷಣಾ ಸಚಿವ ರಾಜನಾಥ ಸಿಂಗ್, ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತೀನ ಗಡ್ಕರಿ, ಹಿರಿಯ ನಾಯಕ ಜೆಪಿ ನಡ್ಡಾ ಸೇರಿದಂತೆ ಅನೇಕರು ಭಾಗವಹಿಸಿದ್ರು.




Leave a Reply

Your email address will not be published. Required fields are marked *

error: Content is protected !!