ದೆಹಲಿ ಹಿಂಸಾಚಾರ: ಶಾ, ಕೇಜ್ರಿವಾಲ್ ತುರ್ತು ಸಭೆ

312

ನವದೆಹಲಿ: ಪೌರತ್ವ ಕಾಯ್ದೆ ತಿದ್ದುಪಡಿ ವಿರೋಧಿಸಿ ನಡೆಯುತ್ತಿದ್ದ ಪ್ರತಿಭಟನೆ ಇದೀಗ ಹಿಂಸಾಸ್ವರೂಪ ಪಡೆದುಕೊಂಡಿದೆ. ಇಲ್ಲಿವರೆಗೂ 7 ಜನ ಮೃತಪಟ್ಟಿದ್ದಾರೆ. ಈ ಹಿನ್ನೆಲೆಯಲ್ಲಿ ಕೇಂದ್ರ ಗೃಹ ಸಚಿವ ಅಮಿತ ಶಾ, ದೆಹಲಿ ಸಿಎಂ ಅರವಿಂದ ಕೇಜ್ರಿವಾಲ್ ನೇತೃತ್ವದಲ್ಲಿ ತುರ್ತು ಸಭೆ ನಡೆಸಲಾಗ್ತಿದೆ.

ಹಿಂಸಾಚಾರಕ್ಕೆ ಸಂಬಂಧಿಸಿದಂತೆ ಎಫ್ಐಆರ್ ದಾಖಲಿಸುವಂತೆ ಹೈಕೋರ್ಟ್ ಹೇಳಿದೆ. ಪ್ರತಿಭಟನೆ ನಡೆಯುತ್ತಿರುವ ಪ್ರದೇಶಗಳಲ್ಲಿ ಪೊಲೀಸ್ ಭದ್ರತೆ ಕಡಿಮೆಯಿದೆ ಎಂದು ಸಿಎಂ ಕೇಜ್ರಿವಾಲ್ ಹೇಳಿದ್ದಾರೆ. ಜಫ್ರಬಾದ್, ಮೌಜ್ ಪುರ್, ಚಾಂದ್ ಬಾಗ್, ಖುರೇಜಿ ಖಾಸ್ ಹಾಗೂ ಭಜನ್ ಪುರದಲ್ಲಿ ಪರಿಸ್ಥಿತಿ ವಿಕೋಪಕ್ಕೆ ತಿರುಗಿದ್ಮೇಲೆ ಪೊಲೀಸ್ರು ಲಾಠಿಪ್ರಹಾರ ನಡೆಸಿದ್ದಾರೆ ಅಂತಾ ಹೇಳಲಾಗಿದೆ.

ಇನ್ನು ಸಭೆಯಲ್ಲಿ ಲೆಫ್ಟಿನೆಂಟ್ ಗವರ್ನರ್ ಅನಿಲ ಬಾಯ್ ಜಾಲ್, ಪೊಲೀಸ್ ಆಯುಕ್ತರಾದ ಅಮೂಲ್ಯ ಪಟ್ನಾಯಕ್, ಬಿಜೆಪಿ ಮುಖಂಡ ಮನೋಜ ತಿವಾರಿ, ಕಾಂಗ್ರೆಸ್ ಮುಖಂಡ ಸುಭಾಷ ಚೋಪ್ರಾ ಭಾಗವಹಿಸಿದ್ದಾರೆ.




Leave a Reply

Your email address will not be published. Required fields are marked *

error: Content is protected !!