ದೆಹಲಿ ಹಿಂಸಾಚಾರ: ಮಧ್ಯರಾತ್ರಿ ಹೈಕೋರ್ಟ್ ವಿಚಾರಣೆ

349

ನವದೆಹಲಿ: ದೆಹಲಿಯಲ್ಲಿ ನಡೆಯುತ್ತಿರುವ ಹಿಂಸಾಚಾರಕ್ಕೆ ಸಂಬಂಧಿಸಿದಂತೆ ಹೈಕೋರ್ಟ್ ಮಂಗಳವಾರ ಮಧ್ಯರಾತ್ರಿ ವಿಚಾರಣೆ ನಡೆಸಿದೆ. ಘಟನೆಯಲ್ಲಿ ಗಾಯಗೊಂಡವರಿಗೆ ತುರ್ತು ಚಿಕಿತ್ಸೆ ಕ್ರಮ ಕೈಗೊಳ್ಳಿ ಎಂದು ಸೂಚನೆ ನೀಡಲಾಗಿದೆ.

ಲಾಯರ್ ಸೂರೂರ್ ಮಂದೇರ್ ಎಂಬುವರು ಸಲ್ಲಿಸಿದ್ದ ಅರ್ಜಿಯ ವಿಚಾರಣೆಯನ್ನ ನ್ಯಾಯಮೂರ್ತಿ ಎಸ್.ಮುರುಳೀಧರ ತಮ್ಮ ನಿವಾಸದಲ್ಲಿಯೇ ವಿಚಾರಣೆ ನಡೆಸಿ, ಹಿಂಸಾಚಾರ ತಡೆಗೆ ಸೂಕ್ತ ಕ್ರಮಗಳನ್ನ ಅನುಸರಿಸಿ ಎಂದು ಹೇಳಿದ್ದಾರೆ. ಅಲ್ದೇ, ಗಾಯಾಳುಗಳನ್ನ ಗುರು ತೇಜ ಬಹದ್ದೂರ್, ಲೋಕ ನಾಯಕ ಜಯಪ್ರಕಾಶ ನಾರಾಯಣ ಅಥವ ಮೌಲಾನಾ ಅಜರ್ ಸರ್ಕಾರಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ ನೀಡಲು ಸೂಚಿಸಿದ್ದಾರೆ.

ದೆಹಲಿ ಹಿಂಸಾಚಾರದಲ್ಲಿ ಈಗಾಗ್ಲೇ 13 ಮಂದಿ ಪ್ರಾಣ ಕಳೆದುಕೊಂಡಿದ್ದಾರೆ. ನೂರಾರು ಮಂದಿ ಗಾಯಗೊಂಡಿದ್ದಾರೆ. ಈ ಬಗ್ಗೆ ವಕೀಲ ಸೂರೂರ್ ಮಂದೇರ್ ತಮ್ಮ ರಿಟ್ ಅರ್ಜಿಯಲ್ಲಿ ತಿಳಿಸಿದ್ದು, ಗಾಯಾಳುಗಳ ಬಗ್ಗೆ ಸರ್ಕಾರ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಮನವಿ ಮಾಡಿಕೊಂಡಿದ್ದಾರೆ.




Leave a Reply

Your email address will not be published. Required fields are marked *

error: Content is protected !!