ಈ ರಸ್ತೆಗೆ ಲೀಲಾವತಿ ಹೆಸರಿಡಲು ಒತ್ತಾಯ

194

ಪ್ರಜಾಸ್ತ್ರ ಸಿನಿಮಾ ಡೆಸ್ಕ್

ಬೆಂಗಳೂರು: ಇತ್ತೀಚೆಗೆ ನಿಧನರಾದ ಸ್ಯಾಂಡಲ್ ವುಡ್ ಹಿರಿಯ ನಟಿ ಲೀಲಾವತಿ ಅವರ ಹೆಸರನ್ನು ರಸ್ತೆಯೊಂದಕ್ಕೆ ಇಡಬೇಕು ಎನ್ನುವ ಕೂಗು ಕೇಳಿ ಬಂದಿದೆ. ಬಿಬಿಎಂಪಿ ನೌಕರರ ಕ್ಷಮಾಭಿವೃದ್ಧಿ ಸಂಘದಿಂದ ಆಯುಕ್ತರಿಗೆ ಪತ್ರ ಬರೆಯಲಾಗಿದೆ.

ನೆಲಮಂಗಲದಿಂದ ಯಶವಂತಪುರ ಸಂಪರ್ಕಿಸುವ ರಸ್ತೆಗೆ ಲೀಲಾವತಿ ಅವರ ಹೆಸರು ಇಡಬೇಕು ಎಂದು ಒತ್ತಾಯ ಮಾಡಲಾಗಿದೆ. ಈ ಕುರಿತು ಬಿಬಿಎಪಿ ಆಯುಕ್ತರು, ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸುತ್ತೇವೆ. ಅಲ್ಲಿಂದ ಯಾವ ರೀತಿ ಆದೇಶ ಬರುತ್ತೋ ಆ ರೀತಿ ಮಾಡಲಾಗುತ್ತೆ ಎಂದಿದ್ದಾರೆ.

ಕನ್ನಡ, ತಮಿಳು, ತೆಲುಗು, ಮಲಯಾಳಂ ಸೇರಿ 600 ಚಿತ್ರಗಳಲ್ಲಿ ನಟಿಸಿದ್ದಾರೆ. ಸಾಮಾಜಿಕ ಸೇವೆಯಲ್ಲಿಯೂ ಕೆಲಸ ಮಾಡಿದ್ದಾರೆ. ಇದನ್ನು ಗುರುತಿಸಿ ರಸ್ತೆಗೆ ಅವರ ಹೆಸರು ಇಡಬೇಕು ಎಂದು ಕೇಳಲಾಗಿದೆ.




Leave a Reply

Your email address will not be published. Required fields are marked *

error: Content is protected !!