ಗೋವಾದಲ್ಲಿ ಕನ್ನಡಿಗರ ಮನೆ ನೆಲಸಮ, ನೆರವಿಗೆ ಸಿಎಂ ಸಿದ್ದರಾಮಯ್ಯ ಮನವಿ

71

ಪ್ರಜಾಸ್ತ್ರ ಸುದ್ದಿ

ಬೆಂಗಳೂರು: ಗೋವಾದ ಸಂಗೋಲ್ಡಾದಲ್ಲಿರುವ ಕನ್ನಡಿಗರ ಮನೆಗಳನ್ನು ನೆಲಸಮ ಮಾಡಿದ ಘಟನೆ ನಡೆದಿದೆ. ಇದನ್ನು ಕರ್ನಾಟಕದ ಮುಖ್ಯಮಂತ್ರಿ ಸಿದ್ದರಾಮಯ್ಯ ಖಂಡಿಸಿದ್ದಾರೆ. ಮನೆ ಕಳೆದುಕೊಂಡ ಕುಟುಂಬಗಳಿಗೆ ಪರ್ಯಾಯ ವ್ಯವಸ್ಥೆ ಮಾಡಿಕೊಡಬೇಕೆಂದು ಮನವಿ ಮಾಡಿದ್ದಾರೆ.

ಈ ಕುರಿತು ಸೋಷಿಯಲ್ ಮೀಡಿಯಾದಲ್ಲಿ ಬರೆದಿರುವ ಸಿಎಂ, ಕನ್ನಡಿಗರಿಗೆ ಸೇರಿದ ಮನೆಗಳನ್ನು ಕೆಡವಿದ ಘಟನೆಯಿಂದ ತೀವ್ರ ಕಳವಳಗೊಂಡಿದ್ದೇನೆ. ಆ ಕುಟುಂಬಗಳಿಗೆ ಪರ್ಯಾಯ ವ್ಯವಸ್ಥೆ ಕಲ್ಪಿಸುವವರೆಗೂ ತೆರವು ಕೆಲಸ ನಿಲ್ಲಿಸುವಂತೆ ಗೋವಾದ ಮುಖ್ಯಮಂತ್ರಿ ಸಾವಂತ್ ಅವರಿಗೆ ಮನವಿ ಮಾಡುತ್ತೇನೆ ಎಂದಿದ್ದಾರೆ.




Leave a Reply

Your email address will not be published. Required fields are marked *

error: Content is protected !!