ಉಪಸಭಾಪತಿ ಮಾಮನಿ ನಿಧನ

241

ಪ್ರಜಾಸ್ತ್ರ ಸುದ್ದಿ

ಬೆಂಗಳೂರು: ಸವದತ್ತಿಯ ಬಿಜೆಪಿ ಶಾಸಕ ಹಾಗೂ ವಿಧಾನಸಭೆ ಉಪಸಭಾಪತಿ ಆನಂದ್ ಮಾಮನಿ(56) ನಿಧನರಾಗಿದ್ದಾರೆ. ಶನಿವಾರ ತಡರಾತ್ರಿ ಕೊನೆಯುಸಿರೆಳೆದಿದ್ದಾರೆ.

ಕೆಲ ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಅವರು ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ, ಚಿಕಿತ್ಸೆ ಫಲಿಸದೆ ನಿಧನರಾಗಿದ್ದಾರೆ.

ಇವರ ನಿಧನಕ್ಕೆ ಮುಖ್ಯಮಂತ್ರಿ ಬೊಮ್ಮಾಯಿ ಸೇರಿದಂತೆ ರಾಜಕೀಯ ಗಣ್ಯರು ಸಂತಾಪ ಸೂಚಿಸಿದ್ದಾರೆ. ಸವದತ್ತಿ ಕ್ಷೇತ್ರದಿಂದ ಮೂರು ಬಾರಿ ಶಾಸಕರಾಗಿದ್ದರು. ಇಂದು ಮಧ್ಯಾಹ್ನ ಅಂತ್ಯಕ್ರಿಯೆ ನಡೆಯಲಿದೆ.




Leave a Reply

Your email address will not be published. Required fields are marked *

error: Content is protected !!