ಪೊಲೀಸರು ಸನ್ಮಾನ, ಸಮಾರಂಭಗಳಿಂದ ದೂರ ಇರಬೇಕು: ಡಿಜಿ, ಐಜಿಪಿ ಪ್ರವೀಣ್ ಸೂದ್

400

ಪ್ರಜಾಸ್ತ್ರ ಸುದ್ದಿ

ಬೆಂಗಳೂರು: ಸಭೆ ಸಮಾರಂಭಗಳಲ್ಲಿ ಪೊಲೀಸರು ಭಾಗವಹಿಸಿದು ಸಹಜ. ಪ್ರಮೋಷನ್ ಆದಾಗ, ವರ್ಗಾವಣೆಯಾಗಿ ಹೋಗುವಾಗ, ಬಂದಾಗ ಅವರಿಗೆ ಸನ್ಮಾನ ಮಾಡುವುದು ಸಹಜ. ಇನ್ಮುಂದೆ ಇದನ್ನ ಮಾಡುವಂತಿಲ್ಲ. ಒಂದು ವೇಳೆ ಕಾರ್ಯಕ್ರಮದಲ್ಲಿ ಭಾಗವಹಿಸಬೇಕಾದರೆ ಒಂದಿಷ್ಟು ಷರತ್ತುಗಳನ್ನ ವಿಧಿಸಿ ರಾಜ್ಯ ಪೊಲೀಸ್ ಮಹಾನಿರ್ದೇಶಕರಾದ ಪ್ರವೀಣ ಸೂದ್ ಆದೇಶ ಹೊರಡಿಸಿದ್ದಾರೆ.

ಅಪರಾಧ ಕೃತ್ಯಗಳಲ್ಲಿ ತೊಡಗಿಕೊಂಡವರ ಜೊತೆ ಸಂಬಂಧ ಇಟ್ಟುಕೊಳ್ಳುವುದಾಗಲಿ, ಪೊಲೀಸ್ ಠಾಣೆಯಲ್ಲಿ ಹುಟ್ಟು ಹಬ್ಬ, ಮದುವೆ ವಾರ್ಷಿಕೋತ್ಸವ ಸೇರಿದಂತೆ ಇತರೆ ಸನ್ಮಾನ ಕಾರ್ಯಕ್ರಮ ಮಾಡುವಂತಿಲ್ಲ. ಖಾಸಗಿ ಕಾರ್ಯಕ್ರಮಗಳಲ್ಲಿ ಭಾಗವಹಿಸುವುದಾದರೆ, ವ್ಯಕ್ತಿಯ, ಸಂಘ, ಸಂಸ್ಥೆಗಳ ಪೂರ್ವಾಪರ ತಿಳಿದುಕೊಳ್ಳಬೇಕು. ವರ್ಗಾವಣೆ, ಮುಂಬಡ್ತಿ ಸಂದರ್ಭದಲ್ಲಿ ಸನ್ಮಾನ ಸಮಾರಂಭಗಳಿಂದ ಆದಷ್ಟ ದೂರ ಇರುವುದು ಒಳ್ಳೆಯದು. ಈಗಾಗ್ಲೇ ಸೋಷಿಯಲ್ ಮೀಡಿಯಾ ಸೇರಿದಂತೆ ಮಾಧ್ಯಮಗಳಲ್ಲಿ ಈ ಬಗ್ಗೆ ಸಾಕಷ್ಟು ಸುದ್ದಿಯಾಗುತ್ತಿವೆ. ಹೀಗಾಗಿ ಪೊಲೀಸ್ ಇಲಾಖೆಗೆ ಕೆಟ್ಟ ಹೆಸರು ತರವಂತಹ ಯಾವುದೇ ಕೆಲಸ ಮಾಡದಂತೆ ಎಚ್ಚರಿಕೆ ವಹಿಸಬೇಕೆಂದು ಆದೇಶದಲ್ಲಿ ತಿಳಿಸಲಾಗಿದೆ.




Leave a Reply

Your email address will not be published. Required fields are marked *

error: Content is protected !!