ನಾನು ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧೆ: ದಿಂಗಾಲೇಶ್ವರ ಸ್ವಾಮೀಜಿ

86

ಪ್ರಜಾಸ್ತ್ರ ಸುದ್ದಿ

ಬೆಂಗಳೂರು: ಧಾರವಾಡ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಪ್ರಲ್ಹಾದ್ ಜೋಶಿ ವಿರುದ್ಧ ವಾಗ್ದಾಳಿ ನಡೆಸುತ್ತಾ ಬರುತ್ತಿರುವ ಶಿರಹಟ್ಟಿಯ ಭಾವೈಕ್ಯತೆಯ ಫಕೀರೇಶ್ವರ ಮಠದ ಫಕೀರ ದಿಂಗಾಲೇಶ್ವರ ಸ್ವಾಮೀಜಿ, ತಾವು ಸ್ವತಂತ್ರ ಅಭ್ಯರ್ಥಿಯಾಗಿ ಚುನಾವಣೆಯಲ್ಲಿ ಸ್ಪರ್ಧಿಸುವುದಾಗಿ ಘೋಷಿಸಿದ್ದಾರೆ.

ಸಿಲಿಕಾನ್ ಸಿಟಿಯಲ್ಲಿನ ಲಿಂಗಾಯತ ಭವನದಲ್ಲಿ ಇಂದು ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಅವರು, ತಮ್ಮ ನಿರ್ಧಾರವನ್ನು ತಿಳಿಸಿದ್ದಾರೆ. ಇದರೊಂದಿಗೆ ರಾಜ್ಯ ರಾಜಕೀಯದಲ್ಲಿ ಚುನಾವಣಾ ರಾಜಕಾರಣಕ್ಕೆ ಸ್ವಾಮೀಜಿಯೊಬ್ಬರ ಪ್ರವೇಶವಾಗಿದೆ.

ಧಾರವಾಡ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಪ್ರಲ್ಹಾದ್ ಜೋಶಿ ಬದಲಾಯಿಸುವಂತೆ ಆಗ್ರಹಿಸಿದ್ದರು. ಅವರಿಂದ ಅನ್ಯಾಯಕ್ಕೆ ಒಳಗಾದ ಜನರ ಪರವಾಗಿದ್ದೇನೆ. ಅವರ ಪರ ಧ್ವನಿ ಎತ್ತುವ ಕೆಲಸ ಮಾಡುತ್ತಿದ್ದೇನೆ ಎಂದಿದ್ದರು. ಈಗ ಸ್ವತಃ ಅವರ ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕೆ ಇಳಿಯುವ ಬಗ್ಗೆ ಘೋಷಿಸಿದ್ದಾರೆ. ಕಾಂಗ್ರೆಸ್ ನಿಂದ ವಿನೋದ್ ಅಸೂಟಿ ಕಣದಲ್ಲಿದ್ದಾರೆ.




Leave a Reply

Your email address will not be published. Required fields are marked *

error: Content is protected !!