ಸರ್ಕಾರ ಬೀಳಿಸುವ ಸುಳಿವು ನೀಡಿದರಾ ಶಾಸಕ ಟೆಂಗಿನಕಾಯಿ?

187

ಪ್ರಜಾಸ್ತ್ರ ಸುದ್ದಿ

ಹುಬ್ಬಳ್ಳಿ: ಜಿಲ್ಲಾಧ್ಯಕ್ಷರ ನೇತೃತ್ವದಲ್ಲಿ ಬಿಜೆಪಿ ಕಾರ್ಯಕಾರಣಿ ಸಭೆ ನಡೆಯುತ್ತಿದೆ. ಲೋಕಸಭೆ ಚುನಾವಣೆಯಲ್ಲಿ 28 ಕ್ಷೇತ್ರಗಳಲ್ಲೂ ಗೆಲುವು ಸಾಧಿಸುವ ಕುರಿತು ಚರ್ಚೆ ನಡೆಸಲಾಗುತ್ತಿದೆ. ಈ ವೇಳೆ ಮಾಧ್ಯಮದವರೊಂದಿಗೆ ಮಾತನಾಡಿರುವ ಶಾಸಕ ಮಹೇಶ್ ಟೆಂಗಿನಕಾಯಿ, ಲೋಕಸಭೆ ಚುನಾವಣೆ ಬಳಿಕ ರಾಜ್ಯದಲ್ಲಿ ದೊಡ್ಡ ಬದಲಾವಣೆಯಾಗುತ್ತೆ. ಕಾದು ನೋಡಿ ಎಂದಿದ್ದಾರೆ.

ಶಾಸಕ ಟೆಂಗಿನಾಕಾಯಿಯವರ ಈ ಹೇಳಿಕೆ ಕಾಂಗ್ರೆಸ್ ಸರ್ಕಾರವನ್ನು ಬೀಳಿಸುವ ತಂತ್ರಗಾರಿಕೆ ನಡೆಯುತ್ತಿದ್ಯಾ ಎನ್ನುವ ಪ್ರಶ್ನೆ ಮೂಡಿದೆ. ಯಾರೆಲ್ಲ ಪಕ್ಷಕ್ಕೆ ಬರುತ್ತಾರೋ ಅವರೆನ್ನಲ್ಲ ಸೇರ್ಪಡೆ ಮಾಡಿಕೊಳ್ಳುತ್ತೇವೆ. ಅವರೆಲ್ಲರನ್ನೂ ಒಗ್ಗೂಡಿಸಿಕೊಂಡು ಕೆಲಸ ಮಾಡುತ್ತೇವೆ ಎಂದಿದ್ದು, ಕಾಂಗ್ರೆಸ್ ನಿಂದ ಯಾರೆಲ್ಲ ಬಿಜೆಪಿ ಸೇರ್ತಾರೆ ಎನ್ನುವ ಕುತೂಹಲ ಮೂಡಿದೆ.




Leave a Reply

Your email address will not be published. Required fields are marked *

error: Content is protected !!