‘ಆರ್ಥಿಕವಾಗಿ ದಿವಾಳಿ ಮಾಡಿದ್ದೇ ಡಬಲ್ ಇಂಜಿನ್ ಸಾಧನೆ’

229

ಪ್ರಜಾಸ್ತ್ರ ಸುದ್ದಿ

ಬೆಂಗಳೂರು: ಕೇಂದ್ರ ಹಾಗೂ ರಾಜ್ಯ ಬಿಜೆಪಿ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿರುವ ಕೆಪಿಸಿಸಿ ಮಾಜಿ ಅಧ್ಯಕ್ಷ ದಿನೇಶ್ವ ಗುಂಡೂರಾವ್, ದೇಶದ ಜನರನ್ನು ಆರ್ಥಿಕವಾಗಿ ದಿವಾಳಿ ಮಾಡಿದ್ದೇ ಡಬಲ್ ಇಂಜಿನ್ ದೊಡ್ಡ ಸಾಧನೆ ಎಂದಿದ್ದಾರೆ.

ತೆರಿಗೆ ವಿಚಾರಕ್ಕೆ ಸಂಬಂಧಿಸಿದಂತೆ ಟ್ವೀಟ್ ಮಾಡಿರುವ ದಿನೇಶ್ ಗುಂಡೂರಾವ್, ರಕ್ತ ಹಿರುವ ತಿಗಣೆಯಂತೆ ಜನರಿಂದ ತೆರಿಗೆ ಹೀರುತ್ತಿದೆ. ದೇಶದ ಜನರಿಗೆ ದರಿದ್ರ ಭಾಗ್ಯ ಕಲ್ಪಿಸಿದ ಈ ಡಬಲ್ ಇಂಜಿನ್ ಸರ್ಕಾರ ಒಂದು ರೀತಿ ಸ್ಮಶಾಸನದ ಹೆಣವಿದ್ದಂತೆ ಎಂದು ಕಿಡಿ ಕಾರಿದ್ದಾರೆ

ಮೋದಿಯವರು ಹೇಳುತ್ತಿದ್ದ ಅಚ್ಛೇದಿನ್ ಅರ್ಥವನ್ನು ಜನರು ತಪ್ಪಾಗಿ ಅರ್ಥೈಸಿಕೊಂಡು ಅಧಿಕಾರ ನೀಡಿದರು. ಈಗ ಅದೇ ಜನ ಕೇಂದ್ರ ಸರ್ಕಾರದ ತೆರಿಗೆ ದರೋಡೆ ಕಂಡು ಅಚ್ಚೇದಿನ್ ಎಂದರೆ ಕನಸಿನಲ್ಲೂ ಬೆಚ್ಚುವಂತಾಗಿದೆ. ಮೋದಿಯವರಿಗೆ ಅಧಿಕಾರ ಕೊಟ್ಟು ಹರುಷದ ಕೂಳಿಗಾಗಿ ವರುಷದ ಕೂಳು ಕಳೆದುಕೊಂಡಂತಾಗಿದೆ ದೇಶದ ಜನರ ಪರಿಸ್ಥಿತಿ ಎಂದು ಟ್ವೀಟ್ ಮಾಡಿದ್ದಾರೆ.




Leave a Reply

Your email address will not be published. Required fields are marked *

error: Content is protected !!