ಪ್ರಜಾಸ್ತ್ರ ಸುದ್ದಿ
ಬೆಂಗಳೂರು: ಸ್ಯಾಂಡಲ್ ವುಡ್ ಕಲಾ ಸಾಮ್ರಾಟ್ ಎಸ್.ನಾರಾಯಣ್ ಇಂದು ಕಾಂಗ್ರೆಸ್ ಸೇರ್ಪಡೆಯಾಗಿದ್ದಾರೆ. ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ನೇತೃತ್ವದಲ್ಲಿ ಕಾಂಗ್ರೆಸ್ ಸೇರಿದರು.
ಈ ವೇಳೆ ಮಾತನಾಡಿದ ಎಸ್.ನಾರಾಯಣ್, ನಾನು ರಾಜಕೀಯಕ್ಕೆ ಬರಬೇಕು. ಪಕ್ಷ ಸೇರಬೇಕು ಎಂದಾಗ ಕಾಂಗ್ರೆಸ್ ಆಯ್ಕೆ ಮಾಡಿಕೊಂಡೆ. ದೇಶಕ್ಕಾಗಿ ತ್ಯಾಗ ಬಲಿದಾನ ಮಾಡಿದ ಪಕ್ಷ ಕಾಂಗ್ರೆಸ್, ಬಡವರು, ದಲಿತರು, ಶೋಷಿತರ ಧ್ವನಿಯಾಗಿದೆ. ಜಾತ್ಯಾತೀತ ಸಿದ್ದಾಂತಗಳನ್ನು ಒಪ್ಪಿಕೊಂಡು ಬಂದಿದ್ದೇನೆ. 2023ಕ್ಕೆ ಕಾಂಗ್ರೆಸ್ ಅಧಿಕಾರಕ್ಕೆ ತರುವುದಕ್ಕಾಗಿ ದುಡಿಯುತ್ತೇನೆ ಎಂದರು.