ಟಿಪ್ಪು ಸುಲ್ತಾನ್ ನಾಮಫಲಕಕ್ಕೆ ಅಗೌರವ, ಪ್ರತಿಭಟನೆ

119

ಪ್ರಜಾಸ್ತ್ರ ಸುದ್ದಿ

ರಾಯಚೂರು: ಇಲ್ಲಿನ ಮಟನ್ ಮಾರುಕಟ್ಟೆ ಹತ್ತಿರ ಇರುವ ಟಿಪ್ಪು ಸುಲ್ತಾನ್ ನಾಮಫಲಕಕ್ಕೆ ಕಿಡಿಗೇಡಿಗಳು ಚಪ್ಪಲಿ ಹಾರ ಹಾಕಿದ ಘಟನೆ ನಡೆದಿದೆ. ಇದನ್ನು ಖಂಡಿಸಿ ಮುಸ್ಲಿಂ ಸಮುದಾಯದವರು ಪ್ರತಿಭಟನೆ ನಡೆಸಿದ್ದಾರೆ.

ಬೆಳಗಿನ ಜಾವ ಕೃತ್ಯ ಬೆಳಕಿಗೆ ಬಂದಿದೆ. ಇದನ್ನು ನೋಡಿದ ಸಮುದಾಯದ ಯುವಕರು ಇತರರಿಗೆ ಮಾಹಿತಿ ನೀಡಿದ್ದಾರೆ. ಆಗ ಮುಸ್ಲಿಂ ಸಮುದಾಯದವರು ಸೇರಿ ಪ್ರತಿಭಟನೆ ನಡೆಸಿದ್ದಾರೆ. ಸ್ಥಳಕ್ಕೆ ಬಂದ ಪೊಲೀಸರು ಈ ಕೃತ್ಯ ನಡೆಸಿದವರ ವಿರುದ್ಧ ಕ್ರಮ ತೆಗೆದುಕೊಳ್ಳುತ್ತೇವೆ ಪ್ರತಿಭಟನೆ ಕೈಬಿಡಿ ಎಂದಿದ್ದಾರೆ.

ಸಮಾಜದಲ್ಲಿ ಕೋಮು ಸೌಹಾರ್ದತೆ ಕಡೆಸುವ ಸಲುವಾಗಿಯೇ ಈ ರೀತಿಯ ಕೃತ್ಯೆಗಳನ್ನು ಎಸಗುತ್ತಿದ್ದಾರೆ. ತಪ್ಪಿಸ್ಥತರ ವಿರುದ್ಧ ಕ್ರಮ ತೆಗೆದುಕೊಳ್ಳುವ ತನಕ ಪ್ರತಿಭಟನೆ ಕೈಬಿಡಲ್ಲ ಎಂದು ಹಠ ಹಿಡಿದಿದ್ದಾರೆ.




Leave a Reply

Your email address will not be published. Required fields are marked *

error: Content is protected !!