‘ಧರ್ಮದ ಹೆಸರಲ್ಲಿ ಗೂಂಡಾಗಿರಿ ಮಾಡುವವರಿಗೆ ಶಿಕ್ಷೆಯಾಗಲಿ’

276

ಪ್ರಜಾಸ್ತ್ರ ಸುದ್ದಿ

ಬೆಂಗಳೂರು: ಡಿಜೆ ಹಳ್ಳಿ ಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ ಪ್ರತಿಕ್ರಿಯೆ ನೀಡಿದ್ದಾರೆ. ಧರ್ಮದ ಹೆಸರಿನಲ್ಲಿ ಗೂಂಡಾಗಿರಿ ಮಾಡ್ತಾ, ಕಾನೂನು ಕೈಗೆತ್ತಿಕೊಂಡರೆ ಅಂತವರ ವಿರುದ್ಧ ಮುಲಾಜಿಲ್ಲದೆ ಕ್ರಮ ತೆಗೆದುಕೊಳ್ಳಿ ಎಂದಿದ್ದಾರೆ.

ಈ ಬಗ್ಗೆ ಟ್ವೀಟ್ ಮಾಡಿರುವ ಅವರು, ನೆಲದ ಕಾನೂನು ಗೌರವಿಸದ ಯಾರೊಬ್ಬರೂ ಶಿಕ್ಷೆಗೆ ಅರ್ಹರು. ಪುಂಡಾಟ ನಡೆಸಿದವರ ವಿರುದ್ಧ ಸರ್ಕಾರ ಕ್ರಮ ತೆಗೆದುಕೊಳ್ಳಬೇಕು. ಅವಿವೇಕಿಯೊಬ್ಬ ಪೈಂಗರ್ ಬಗ್ಗೆ ಅವಹೇಳನ ಮಾಡಿದ ಆತನಿಗೆ ಶಿಕ್ಷೆಯಾಗಬೇಕು. ಆದ್ರೆ, ಪೈಂಗರ್ ಅನುಯಾಯಿಗಳು ದಾಂಧಲೆ ಮಾಡುವ ಮೂಲಕ ಪ್ರವಾದಿಯ ಪವಿತ್ರ ಸಂದೇಶಗಳನ್ನು ಮಣ್ಣುಪಾಲು ಮಾಡುವುದು ಆ ಧರ್ಮಕ್ಕೆ ಮಾಡಿದ ಅಪಚಾರ ಎಂದಿದ್ದಾರೆ.

ಇದೆ ರೀತಿ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಮಾತ್ನಾಡಿ, ಡಿಜೆ ಹಳ್ಳಿ ಗಲಭೆ ಹಾಗೂ ಅದಕ್ಕೆ ಪ್ರಚೋದನೆ ನೀಡಿದ ಘಟನೆಗಳೆರಡೂ ಖಂಡನೀಯ ಎಂದಿದ್ದಾರೆ. ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ ಮಾತ್ನಾಡಿ, ಗಲಭೆ ಹಿಂದೆ ವ್ಯವಸ್ಥಿತಿ ಸಂಚಿದೆ. ಯಾರೂ ಕಾನೂನು ಕೈಗೆತ್ತಿಕೊಳ್ಳಬೇಡಿ ಎಂದಿದ್ದಾರೆ. ಇನ್ನು ಸಿಎಂ ಬಿ.ಎಸ್ ಯಡಿಯೂರಪ್ಪ ತುರ್ತು ಸಭೆ ಕರೆದಿದ್ದು, ಗಲಾಟೆ ಮಾಡಿದವರ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳಲು ಮುಂದಾಗಿದ್ದಾರೆ.




Leave a Reply

Your email address will not be published. Required fields are marked *

error: Content is protected !!