ಡಿಜೆ ಹಳ್ಳಿ ಘಟನೆ: ಗಲಭೆಕೋರರಿಂದಲೇ ನಷ್ಟ ವಸೂಲಿ

288

ಪ್ರಜಾಸ್ತ್ರ ಸುದ್ದಿ

ಬೆಂಗಳೂರು: ಕಳೆದ ಮಂಗಳವಾರ ರಾತ್ರಿ ನಡೆದ ಡಿಜೆ ಹಳ್ಳಿ ಹಾಗೂ ಕೆಜಿ ಹಳ್ಳಿ ಘಟನೆ ಸಂಬಂಧ, ರಾಜ್ಯ ಸರ್ಕಾರ ಮಹತ್ವದ ನಿರ್ಧಾರ ತೆಗೆದುಕೊಂಡಿದೆ. ಗಲಭೆ ಸಂಬಂಧ, ಗೂಂಡಾವರ್ತನೆ ತೋರಿದ ಆರೋಪಿಗಳಿಂದಲೇ ನಷ್ಟ ವಸೂಲಿಗೆ ಆದೇಶಿಸಲಾಗಿದೆ.

ಸಿಎಂ ನಿವಾಸ ಕಾವೇರಿಯಲ್ಲಿ ನಡೆದ ಸಭೆಯಲ್ಲಿ ಈ ತೀರ್ಮಾನಕ್ಕೆ ಬರಲಾಗಿದೆ. ಅಲ್ದೇ, ಈ ಪ್ರಕರಣದಲ್ಲಿ ಭಾಗಿಯಾದವರ ಮೇಲೆ ಗೂಂಡಾ ಕಾಯ್ದೆ ಅಡಿ ಹಾಗೂ ಕಾನೂನು ಬಾಹಿರ ಚಟುವಟಿಕೆ ತಡೆ ಕಾಯ್ದೆ ಅಡಿಯಲ್ಲಿ ದೂರು ದಾಖಲಿಸಲು ನಿರ್ಧರಿಸಲಾಗಿದೆ. ಈ ಸಭೆಯಲ್ಲಿ ಅಡ್ವೊಕೇಟ್ ಜನರಲ್ ಪ್ರಭುಲಿಂಗ ನಾವಡಗಿ ಅವರಿಂದ ಆಸ್ತಿ ಮುಟ್ಟುಗೋಲು ಸಂಬಂಧ ಕಾನೂನು ಸಲಹೆ ಪಡೆಯಲಾಗಿದೆ.

ಘಟನೆ ಸಂಬಂಧ 300 ಆರೋಪಿಗಳನ್ನ ಬಂಧಿಸಲಾಗಿದ್ದು, ಮಹತ್ವದ ಮಾಹಿತಿ ಲಭ್ಯವಾಗಿದೆ. ತನಿಖಾ ಹಂತದಲ್ಲಿರುವುದ್ರಿಂದ ಹೆಚ್ಚಿನ ಮಾಹಿತಿ ನೀಡಲಾಗುವುದಿಲ್ಲವೆಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

ಸಭೆಯಲ್ಲಿ ಪೊಲೀಸ್ ಮಹಾನಿರ್ದೇಶಕ ಪ್ರವೀಣ ಸೂದ್, ನಗರ ಪೊಲೀಸ್ ಆಯುಕ್ತ ಕಮಲ್ ಪಂಥ್, ರಾಜ್ಯ ಸರ್ಕಾರದ ಮುಖ್ಯಕಾರ್ಯದರ್ಶಿ ವಿಜಯ ಭಾಸ್ಕರ, ಹೆಚ್ಚುವರಿ ಮುಖ್ಯಕಾರ್ಯದರ್ಶಿ ರಜನೀಶ ಗೊಯಲ್, ಸಿಸಿಬಿ ಜಂಟಿ ಪೊಲೀಸ್ ಆಯುಕ್ತ ಸಂದೀಪ ಪಾಟೀಲ, ಗುಪ್ತಚರ ವಿಭಾಗದ ಮುಖ್ಯಸ್ಥ ಬಿ.ದಯಾನಂದ ಹಾಗೂ ಕಾನೂನು ಸುವ್ಯವಸ್ಥೆ ವಿಭಾಗದ ಎಡಿಜಿಪಿ ಅಮರಕುಮಾರ ಪಾಂಡೆ ಭಾಗವಹಿಸಿದ್ರು.




Leave a Reply

Your email address will not be published. Required fields are marked *

error: Content is protected !!