ಡಿಕೆಶಿ ಬಂಧನಕ್ಕೆ ಬೆಂಬಲಿಗರಿಂದ ಪ್ರತಿಭಟನೆ

576

ಬೆಂಗಳೂರು: ಮಾಜಿ ಸಚಿವ ಡಿ.ಕೆ ಶಿವಕುಮಾರ ಇಡಿ ಅಧಿಕಾರಿಗಳಿಂದ ನಿನ್ನೆ ರಾತ್ರಿ ಬಂಧನಕ್ಕೆ ಒಳಗಾಗಿದ್ದಾರೆ. ಇದನ್ನ ಖಂಡಿಸಿ ರಾಜ್ಯದ ಹಲವು ಭಾಗಗಳಲ್ಲಿ ತೀವ್ರ ಸ್ವರೂಪದ ಪ್ರತಿಭಟನೆ ನಡೆಸಲಾಗ್ತಿದೆ. ಡಿಕೆಶಿ ಬೆಂಬಲಿಗರು, ಕಾಂಗ್ರೆಸ್ ಕಾರ್ಯಕರ್ತರು ಹಾಗೂ ಜೆಡಿಎಸ್ ಸಹ ಪ್ರತಿಭಟನೆಗೆ ಸಾಥ್ ನೀಡುವ ಇಂಗಿತವನ್ನ ವ್ಯಕ್ತಪಡಿಸಿದೆ.

ಇನ್ನು ರಾಮನಗರ, ಕನಕಪುರ ಭಾಗಗಳಲ್ಲಿ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ. ಡಿಕೆಶಿ ಬೆಂಬಲಿಗರು ಟೈಯರ್ ಗಳಿಗೆ ಬೆಂಕಿ ಹಚ್ಚಿದ್ದಾರೆ. ಬಸ್ ಗೂ ಬೆಂಕಿ ಹಚ್ಚಿದ್ರಿಂದ ಸಂಪೂರ್ಣವಾಗಿ ಸುಟ್ಟು ಭಸ್ಮವಾಗಿದೆ. ಕಾರುಗಳ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ. ಈಗಾಗ್ಲೇ ಇದಕ್ಕೆ ಸಂಬಂಧಿಸಿದಂತೆ 15 ಜನರನ್ನ ಬಂಧಿಸಲಾಗಿದೆ. ಹಿಂಸಾತ್ಮಕ ಘಟನೆಗಳು ನಡೆಯುವ ಹಿನ್ನೆಲೆಯಲ್ಲಿ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ.

ಕಾರಿನ ಗಾಜು ಒಡೆದಿರುವುದು

ಇನ್ನು ಸಿಎಂ ನಿವಾಸಕ್ಕೂ ಹೆಚ್ಚಿನ ಭದ್ರತೆ ನೀಡಲಾಗಿದೆ. ಪೊಲೀಸ್ ಮಹಾನಿರ್ದೇಶಕ ನೀಲಮ್ಮಣಿ ಅವರು ಸಿಎಂ ಭೇಟಿ ಮಾಡಿ ಹಲವು ಮಹತ್ವದ ವಿಚಾರಗಳ ಕುರಿತು ಚರ್ಚೆ ನಡೆಸಿದ್ರು. ಇನ್ನು ಗೃಹ ಸಚಿವ ಬಸವರಾಜ ಬೊಮ್ಮಾಯಿ ಉನ್ನತ ಮಟ್ಟದ ಪೊಲೀಸ್ ಅಧಿಕಾರಿಗಳೊಂದಿಗೆ ಚರ್ಚೆ ನಡೆಸಿದ್ರು. ಭದ್ರತೆ ವಿಚಾರ ಸೇರಿದಂತೆ ಕಾನೂನು ಉಲ್ಲಂಘನೆ ಮಾಡಿದವರ ವಿರುದ್ಧ ಶಿಸ್ತು ಕ್ರಮ ತೆಗೆದುಕೊಳ್ಳಲು ಪೊಲೀಸ್ ಇಲಾಖೆ ಮುಂದಾಗಿದೆ.




Leave a Reply

Your email address will not be published. Required fields are marked *

error: Content is protected !!