ಬೆಂಗಳೂರು: ಮಾಜಿ ಸಚಿವ, ಶಾಸಕ ಡಿ.ಕೆ ಶಿವಕುಮಾರ ಜಾಮೀನು ಅರ್ಜಿ ವಿಚಾರಣೆ ನಾಳೆ ದೆಹಲಿ ಹೈಕೋರ್ಟ್ ನಲ್ಲಿ ನಡೆಯಲಿದೆ. ಇಡಿಯಿಂದ ಬಂಧನಕ್ಕೆ ಒಳಗಾಗಿರುವ ಡಿ.ಕೆ ಶಿವಕುಮಾರ ತಿಹಾರ್ ಜೈಲಿನಲ್ಲಿದ್ದಾರೆ.
ನ್ಯಾಯಮೂರ್ತಿ ಸುರೇಶಕುಮಾರ ಕೈಟ್ ನೇತೃತ್ವದ ಪೀಠದಲ್ಲಿ ಅರ್ಜಿ ವಿಚಾರಣೆ ನಡೆಯಲಿದೆ. ಹೀಗಾಗಿ ಸಾಕಷ್ಟು ಕುತೂಹಲ ಮೂಡಿಸಿದೆ. ಕಳೆದ ಬುಧವಾರ ನಡೆದ ಇಡಿ ವಿಶೇಷ ನ್ಯಾಯಾಲಯದಲ್ಲಿ ನಡೆದ ವಿಚಾರಣೆಯಲ್ಲಿ ಅರ್ಜಿ ವಜಾಗೊಳಿಸಿತ್ತು.