ಡಿಎಂಕೆ ಪ್ರಣಾಳಿಕೆ, ಡಿ.ಕೆ ಶಿವಕುಮಾರ್ ವಿರುದ್ಧ ಆರ್.ಅಶೋಕ್ ಕಿಡಿ

83

ಪ್ರಜಾಸ್ತ್ರ ಸುದ್ದಿ

ಬೆಂಗಳೂರು: ತಮಿಳುನಾಡು ಡಿಎಂಕೆ ಪಕ್ಷ ತನ್ನ ಪ್ರಣಾಳಿಕೆಯಲ್ಲಿ ಮೇಕೆದಾಟು ಯೋಜನೆ ಮಾಡಲು ಬಿಡುವುದಿಲ್ಲ ಎಂದು ಹೇಳಿದೆ. ಇದರ ವಿರುದ್ಧ ಕರ್ನಾಟಕ ವಿಧಾನಸಭೆ ವಿಪಕ್ಷ ನಾಯಕ ಆರ್.ಅಶೋಕ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಸೋಷಿಯಲ್ ಮೀಡಿಯಾ ಎಕ್ಸ್ ನಲ್ಲಿ ಈ ಬಗ್ಗೆ ಪೋಸ್ಟ್ ಮಾಡಿದ್ದಾರೆ. ಮೇಕೆದಾಟು ಯೋಜನೆಯನ್ನು ಯಾವುದೇ ಕಾರಣಕ್ಕೂ ಜಾರಿ ಮಾಡಲು ಬಿಡುವುದಿಲ್ಲ ತಮ್ಮ ಇಂಡಿಯಾ ಮಿತ್ರಪಕ್ಷ ಡಿಎಂಕೆ ತನ್ನ ಪ್ರಣಾಳಿಕೆಯಲ್ಲಿ ಘೋಷಣೆ ಮಾಡಿದೆಯಲ್ಲ ಡಿಸಿಎಂ ಡಿ.ಕೆ ಶಿವಕುಮಾರ್ ಅವರೇ, ಈಗ ನಮ್ಮ ನೀರು ನಮ್ಮ ಹಕ್ಕು ಎಂದು ತಮ್ಮ ಶಾಸಕರನ್ನು ಚೆನ್ನೈಗೆ ಕರೆದುಕೊಂಡು ಹೋಗಿ ಪ್ರತಿಭಟನೆ ಮಾಡ್ತೀರಾ ಅಥವ ರಾಹುಲ್ ಗಾಂಧಿಯವರನ್ನು ಮೆಚ್ಚಿಸಲು ಕನ್ನಡಿಗರ ಹಿತಾಸಕ್ತಿ ಬಲಿಕೊಟ್ಟು ರಾಜಿ ಮಾಡಿಕೊಳ್ಳುತ್ತೀರಾ?

ಬೆಂಗಳೂರಿಗೆ ನೀರು ತರುತ್ತೇವೆ ಎಂದು ಮೇಕೆದಾಟು ಪಾದಯಾತ್ರೆ ಮಾಡಿ ಕನ್ನಡಿಗರ ಮೂಗಿಗೆ ತುಪ್ಪ ಸವರಿ ಅಧಿಕಾರಕ್ಕೇರಿದ ನಾಡದ್ರೋಹಿ ಕಾಂಗ್ರೆಸ್ ಸರ್ಕಾರ ಈಗ ಕನ್ನಡಿಗರ ಬೆನ್ನಿಗೆ ಚೂರಿ ಹಾಕುತ್ತಿದೆ ಎಂದು ವಾಗ್ದಾಳಿ ನಡೆಸಿದ್ದಾರೆ.




Leave a Reply

Your email address will not be published. Required fields are marked *

error: Content is protected !!