ಉದ್ಘಾಟನೆಗೊಂಡಿದ್ದ ಬೇಸ್ಅನ್ನು ಪ್ರಧಾನಿ ಮೋದಿ ಮತ್ತೆ ಉದ್ಘಾಟಿಸಿದರಾ?

348

ಪ್ರಜಾಸ್ತ್ರ ಸುದ್ದಿ

ಬೆಂಗಳೂರು: ಇಂದು ಪ್ರಧಾನಿ ಮೋದಿ ಡಾ.ಬಿ.ಆರ್ ಅಂಬೇಡ್ಕರ್ ಸ್ಕೂಲ್ ಆಫ್ ಎಕಾನಿಮಿಕ್ಸ್ ಕಟ್ಟಡ ಉದ್ಘಾಟಿಸಿದ್ದಾರೆ. ಆದರೆ, ಇದು ಇದೀಗ ಬೇರೆ ಸ್ವರೂಪ ಪಡೆದುಕೊಂಡಿದೆ. ಅದೇನು ಅಂದರೆ, 2017ರಲ್ಲೇ ಬೇಸ್ ಕಟ್ಟಡ ಉದ್ಘಾಟಿಸಲಾಗಿದೆ ಅನ್ನೋದು.

ಕಟ್ಟಡದ ಶಂಕುಸ್ಥಾಪನೆ ಮಾಡಿದ್ದ ಅಂದಿನ ರಾಷ್ಟ್ರಪತಿ ಪ್ರಣಬ್ ಮುಖರ್ಜಿ, ಮುಂದೆ ಅಕ್ಟೋಬರ್ 4, 2017ರಲ್ಲಿ ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರು ಉದ್ಘಾಟಿಸಿದ್ದಾರೆ ಎಂದು ಅಂದಿನ ಕರ್ನಾಟಕ ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಈ ಬಗ್ಗೆ ಸ್ವತಃ ಮಾಜಿ ಸಿಎಂ ಸಿದ್ದರಾಮಯ್ಯ ಸರಣಿ ಟ್ವೀಟ್ ಮೂಲಕ ಬೇಸ್ ಬಗ್ಗೆ ಮಾಹಿತಿ ನೀಡಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ಅವರು ಡಾ.ಬಿ.ಆರ್ ಅಂಬೇಡ್ಕರ್ ಸ್ಕೂಲ್ ಆಫ್ ಎಕಾನಿಮಿಕ್ಸ್ ನೂತನ ಆವರಣವನ್ನು ಉದ್ಘಾಟಿಸುತ್ತಿದ್ದಾರೆ. ಈ ಸಮಾರಂಭಕ್ಕೆ ಶುಭ ಹಾರೈಸುವೆ ಎಂದಿದ್ದಾರೆ. ಆದರೆ, ಕಟ್ಟಡಕ್ಕೆ ಕುರಿತಂತೆ ಸರಣಿ ಟ್ವೀಟ್ ಮಾಡಿ ಇದು ಸತ್ಯ ಅನ್ನೋವಂತೆ ತೋರಿಸಿದ್ದಾರೆ. ಇನ್ನು ಸೋಷಿಯಲ್ ಮೀಡಿಯಾದಲ್ಲಿ ಈ ಬಗ್ಗೆ ಚರ್ಚೆಯಾಗುತ್ತಿದೆ.




Leave a Reply

Your email address will not be published. Required fields are marked *

error: Content is protected !!