ರಾಜ್ಯಾದ್ಯಂತ ಸರಳವಾಗಿ ಡಾ.ಅಂಬೇಡ್ಕರ್ ಜಯಂತಿ ಆಚರಣೆ

424

ಬೆಂಗಳೂರು: ಕೋವಿಡ್ 19 ಪರಿಣಾಮ ಇಡೀ ದೇಶ ಕಂಪ್ಲೀಟ್ ಲಾಕ್ ಡೌನ್ ಆಗಿದೆ. ಅದು ಅಲ್ಲದೇ ಇದೀಗ ಮೇ 3ರ ತನಕ ಮುಂದೂಡಲಾಗಿದೆ. ಹೀಗಾಗಿ ಸಾರ್ವಜನಿಕರು ಯಾರೂ ಹೊರಗೆ ಬರುವಂತಿಲ್ಲ. ಇದ್ರಿಂದಾಗಿ ಡಾ.ಬಿ.ಆರ್ ಅಂಬೇಡ್ಕರ್ ಅವರ ಜಯಂತಿಯನ್ನ ಎಲ್ಲೆಡೆ ಅತ್ಯಂತ ಸರಳವಾಗಿ ಆಚರಿಸಲಾಗಿದೆ.

ವಿಧಾನಸೌಧ ಮುಂಭಾಗದಲ್ಲಿರುವ ಡಾ.ಬಿ.ಆರ್ ಅಂಬೇಡ್ಕರ್ ಅವರ ಪ್ರತಿಮೆಗೆ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಮಾಲಾರ್ಪಣೆ ಮಾಡಿ ಗೌರವ ಸಲ್ಲಿಸಿದ್ರು.

ಈ ವೇಳೆ ಕೇಂದ್ರ ಮಾಜಿ ಸಚಿವ ಮಲ್ಲಿಕಾರ್ಜುನ ಖರ್ಗೆ, ಡಿಸಿಎಂ ಗೋವಿಂದ ಕಾರಜೋಳ, ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ ಸೇರಿದಂತೆ ಅನೇಕರು ಭಾಗವಹಿಸಿದ್ರು.

ವಿಜಯಪುರ

ಜಿಲ್ಲೆಯ ಸಿಂದಗಿ ಪಟ್ಟಣದ ತಹಶೀಲ್ದಾರ್ ಕಚೇರಿಯಲ್ಲಿ ಸಂವಿಧಾನ ಶಿಲ್ಪಿ ಡಾ.ಬಿ.ಆರ್ ಅಂಬೇಡ್ಕರ್ ಅವರ ಜಯಂತಿಯನ್ನ ಆಚರಿಸಲಾಗಿದೆ. ವಿವಿಧ ಇಲಾಖೆಯ ಸರ್ಕಾರಿ ಅಧಿಕಾರಿಗಳು ಭಾಗವಹಿಸಿ ಜಯಂತಿ ಆಚರಿಸಲಾಗಿದೆ.

 ತಹಶೀಲ್ದಾರ್ ಸಂಜೀವಕುಮಾರ ದಾಸರ, ಶಿರಸ್ತೇದಾರ್ ಸುರೇಶ ಮ್ಯಾಗೇರಿ, ಪುರಸಭೆ ಮುಖ್ಯಾಧಿಕಾರಿ ಸೈಯದ ಅಹ್ಮದ, ಬಿಸಿಎಂ ಅಧಿಕಾರಿ ಬಸಯ್ಯ ಗೂಳಿಮಠ, ಕಂದಾಯ ನಿರೀಕ್ಷಕ ಐ.ಎ ಮಕಾಂದಾರ, ತಾಲೂಕು ಪಂಚಾಯ್ತಿ ಇಓ ಸುನೀಲ ಮದ್ದಿನ ಸೇರಿದಂತೆ ಇತರೆ ಅಧಿಕಾರಿಗಳು ಭಾಗವಹಿಸಿದ್ರು.

ಬೆಳಗಾವಿ

ಅಥಣಿ: ಕರೋನಾ ವೈರಸ್‌ ಹಿನ್ನೆಲೆಯಲ್ಲಿ ತಾಲೂಕಿನ ಆಡಳಿತ ಕಛೇರಿಯಲ್ಲಿ ಹಾಗೂ ಗ್ರಾಮೀಣ ಪ್ರದೇಶಗಳಲ್ಲಿರುವ ಗ್ರಾಮ ಪಂಚಾಯತಿ ಕಛೇರಿಗಳಲ್ಲಿ ಡಾ. ಬಿ.ಆರ್ ಅಂಬೇಡ್ಕರ್ ಅವರ 129ನೇ ಜಯಂತಿಯನ್ನ ಅತಿ ಸರಳವಾಗಿ ಆಚರಣೆ ಮಾಡಲಾಯಿತು.

ಈ ವೇಳೆ ಪಿಡಿಓ ವ್ಹಿ.ಪಾಯಕ, ಗುರುಲಿಂಗ ಬನಸೋಡೆ, ಅಜೀತ ಶಿಂದೆ, ದಾವಲ ಮುಲ್ಲಾ, ಬಿ.ಡಿ.ತಗಲಿ, ಸಿದ್ದಪ್ಪಾ ಪಾಟೀಲ ಸೇರಿದಂತೆ ಅನೇಕ ಪಾಲ್ಗೊಂಡಿದ್ದರು.

ಮಂಡ್ಯ

ಡಾ.ಬಿ.ಆರ್.ಅಂಬೇಡ್ಕರ್ ಅವರ 129ನೇ ಜಯಂತ್ಯೋತ್ಸವವನ್ನ ಕರೋನಾ ಹಿನ್ನೆಲೆಯಲ್ಲಿ ಅತ್ಯಂತ ಸರಳವಾಗಿ ಕೃಷ್ಣರಾಜಪೇಟೆ ಪಟ್ಟಣದಲ್ಲಿ ಆಚರಿಸಲಾಯಿತು.

ರಾಜ್ಯದ ಪೌರಾಡಳಿತ, ರೇಷ್ಮೆ ಹಾಗೂ ಪೌರಾಡಳಿತ ಖಾತೆಗಳ ಸಚಿವ ಹಾಗೂ ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವರಾದ ಡಾ.ನಾರಾಯಣಗೌಡ ಅವರು, ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ವಿಶೇಷ ಪೂಜೆ ಸಲ್ಲಿಸಿ ಪುಷ್ಪನಮನ ಸಲ್ಲಿಸಿದರು.

ತಹಶೀಲ್ದಾರ್ ಎಂ. ಶಿವಮೂರ್ತಿ, ತಾ.ಪಂ ಕಾರ್ಯನಿರ್ವಾಹಕ ಅಧಿಕಾರಿ ವೈ.ಎನ್.ಚಂದ್ರಮೌಳಿ, ಕ್ಷೇತ್ರಶಿಕ್ಷಣಾಧಿಕಾರಿ ಬಸವರಾಜು, ಕೃಷಿ ಅಧಿಕಾರಿ ಮಂಜುನಾಥ, ತೋಟಗಾರಿಕೆ ಅಧಿಕಾರಿ ಲೋಕೇಶ, ಜಯರಾಂ, ಸರ್ಕಲ್ ಇನ್ಸ್ ಪೆಕ್ಟರ್ ಕೆ.ಎನ್.ಸುಧಾಕರ, ಸಬ್ ಇನ್ಸ್ ಪೆಕ್ಟರ್ ಗಳಾದ ಬ್ಯಾಟರಾಯಗೌಡ, ಲಕ್ಷ್ಮಣ, ಅಗ್ನಿಶಾಮಕ ಅಧಿಕಾರಿ ಶ್ರೀನಿವಾಸರಾವ, ತಾಲೂಕು ಸಮಾಜ ಕಲ್ಯಾಣಾಧಿಕಾರಿ ಡಾ.ಮನುಕುಮಾರ, ಬಿಸಿಎಂ ಅಧಿಕಾರಿ ವೆಂಕಟೇಶ ಸೇರಿದಂತೆ ತಾಲೂಕು ಮಟ್ಟದ ಎಲ್ಲಾ ಅಧಿಕಾರಿಗಳು ಭಾಗವಹಿಸಿದ್ರು.

ಚಿಕ್ಕಬಳ್ಳಾಪುರ

ವೈದ್ಯಕೀಯ ಶಿಕ್ಷಣ ಸಚಿವರ ತವರು ಕ್ಷೇತ್ರವಾದ ಚಿಕ್ಕಬಳ್ಳಾಪುರದಲ್ಲಿ ಡಾ.ಬಿ.ಆರ್ ಅಂಬೇಡ್ಕರ್ ಅವರ ಜಯಂತಿ ಆಚರಿಸಲಾಯ್ತು. ಸಚಿವರಾದ ಡಾ.ಕೆ ಸುಧಾಕರ, ಕೃಷಿ ಸಚಿವ ಬಿ.ಸಿ ಪಾಟೀಲ ಅಂಬೇಡ್ಕರ್ ಮೂರ್ತಿಗೆ ಮಾಲಾರ್ಪಣೆ ಮಾಡಿದ್ರು. ಈ ವೇಳೆ ಕೆಲ ಅಧಿಕಾರಿಗಳು ಭಾಗವಹಿಸಿದ್ರು.




Leave a Reply

Your email address will not be published. Required fields are marked *

error: Content is protected !!