ದಸರಾ, ಸಾಹಿತ್ಯ ಸಮ್ಮೇಳನದ ಮೇಲೂ ಬರದ ಛಾಯೆ

229

ಪ್ರಜಾಸ್ತ್ರ ಸುದ್ದಿ

ಬೆಂಗಳೂರು: ರಾಜ್ಯದಲ್ಲಿ ಈ ವರ್ಷ ತೀವ್ರ ಬರಗಾಲ ಇರುವುದರಿಂದ ಮಂಡ್ಯದಲ್ಲಿ ನಡೆಯಬೇಕಿದ್ದ ಅಖಿಲ ಭಾರತ ಸಾಹಿತ್ಯ ಸಮ್ಮೇಳನ ಮುಂದೂಡಿಲಾಗಿದೆ ಎಂದು ಹೇಳಲಾಗುತ್ತಿದೆ. ಇದರ ಜೊತೆಗೆ ಹಿಂದಿನಂತೆ ಸರಳ ದಸರಾ ಆಚರಣೆಗೂ ಚಿಂತನೆ ನಡೆದಿದೆಯಂತೆ.

ರಾಜ್ಯದಲ್ಲಿ ಸರಿಯಾಗಿ ಮಳೆಯಾಗದ ಕಾರಣ ರೈತರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಕುಡಿಯುವ ನೀರಿಗೂ ಸಮಸ್ಯೆ ಎದುರಾಗಿದೆ. ಇಂತಹ ಸಂದರ್ಭದಲ್ಲಿ ಕೋಟಿ ಕೋಟಿ ಖರ್ಚು ಮಾಡಿ ಅದ್ಧೂರಿ ಸಾಹಿತ್ಯ ಸಮ್ಮೇಳನ ಮಾಡುವುದು ಎಷ್ಟು ಸರಿ ಅನ್ನೋ ಪ್ರಶ್ನೆ ಎದುರಾಗಿದ್ದು, ಹೀಗಾಗಿ ಮುಂದೂಡಲಾಗಿದೆ ಎಂದು ತಿಳಿದು ಬಂದಿದೆ. ಈ ಬಗ್ಗೆ ಸರ್ಕಾರ ಅಧಿಕೃತ ಘೋಷಣೆ ಯಾವಾಗ ಮಾಡುತ್ತೆ ನೋಡಬೇಕು.




Leave a Reply

Your email address will not be published. Required fields are marked *

error: Content is protected !!