ಪ್ರಜಾಸ್ತ್ರ ಸುದ್ದಿ
ಬೆಂಗಳೂರು: ಸ್ಯಾಂಡಲ್ ವುಡ್ ಡ್ರಗ್ಸ್ ದಂಧೆ ಆರೋಪ ಪ್ರಕರಣದಲ್ಲಿ 6ನೇ ಆರೋಪಿಯಾಗಿರುವ ಆದಿತ್ಯ ಆಳ್ವಾ ರೆಸಾರ್ಟ್ ನಲ್ಲಿ ಮಾದಕ ವಸ್ತುಗಳು ಪತ್ತೆಯಾಗಿವೆ. ಇಂದು ಬೆಳಗ್ಗೆ ಸಿಸಿಬಿ ಅಧಿಕಾರಿಗಳು ಆಳ್ವಾ ರೆಸಾರ್ಟ್ ಮೇಲೆ ದಾಳಿ ನಡೆಸಿದ್ರು.
ರೆಸಾರ್ಟ್ ಮೇಲೆ ದಾಳಿ ನಡೆಸಿದ ವೇಳೆ ಮಾದಕ ವಸ್ತುಗಳು ಪತ್ತೆಯಾಗಿವೆ. ಅವುಗಳನ್ನ ವಶಕ್ಕೆ ಪಡೆಯಲಾಗಿದೆ. ಆದ್ರೆ, ಎಸ್ಕೇಪ್ ಆಗಿರುವ ಆದಿತ್ಯ ಆಳ್ವಾ ಪತ್ತೆ ಹಚ್ಚುವ ಕೆಲಸ ನಡೆದಿದೆ.